ಅತಿ ಚಿಕ್ಕ ವಯಸ್ಸಿನಲ್ಲೇ ಸಂಸದರಾದ ಸಾಗರ್ ಖಂಡ್ರೆ ಫಸ್ಟ್ ರಿಯಾಕ್ಷನ್‌

Edited By: ಆಯೇಷಾ ಬಾನು

Updated on: Jun 09, 2024 | 2:19 PM

ಬೀದರ್ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ದೇಶದ ಅತಿ ಕಿರಿಯ ಸಂಸದ ಸಾಗರ ಖಂಡ್ರೆ (26) ಅವರು ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ. ಯುವಕರು, ಉದ್ಯೋಗಕ್ಕಾಗಿ ಹೆಚ್ಚಿನ ಕೆಲಸ ಮಾಡುವೆ. ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚಿನ ತೆರಿಗೆ ಬರಬೇಕಿದೆ ಎಂದರು.

ದೆಹಲಿ, ಜೂನ್.09: ಅತಿ ಚಿಕ್ಕ ವಯಸ್ಸಿನಲ್ಲಿ ಗೆದ್ದು ಸಂಸದರಾದ ಸಾಗರ್ ಖಂಡ್ರೆ ದೆಹಲಿಯಲ್ಲಿ ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೀದರ್​​ನಿಂದ ಗೆದ್ದು ಲೋಕಸಭೆಗೆ ಆಯ್ಕೆಯಾಗಿದ್ದು ಖುಷಿ ತಂದಿದೆ. ಜನರು ನಂಬಿಕೆ ಇಟ್ಟುಕೊಂಡು ನನ್ನನ್ನು ಆಯ್ಕೆ ಮಾಡಿದ್ದಾರೆ. 26ನೇ ವಯಸ್ಸಿನಲ್ಲೇ ನಾನು ಸಂಸದನಾಗಿ ಆಯ್ಕೆಯಾಗಿದ್ದೇನೆ. ಸಮಸ್ಯೆಗಳಿಗೆ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ರಾಜ್ಯಕ್ಕೆ ಕೇಂದ್ರದಿಂದ 5 ಲಕ್ಷ ಕೋಟಿ ತೆರಿಗೆ ಬರಬೇಕಾಗಿದೆ. ರಾಜ್ಯದಲ್ಲಿ ಉದ್ಯೋಗ ಸಮಸ್ಯೆ ಹೆಚ್ಚಿದೆ. ಈ ಬಗ್ಗೆ ಕೆಲಸ ಮಾಡ್ರೇವೆ ಎಂದು ಕಾಂಗ್ರೆಸ್ ಸಂಸದ ಸಾಗರ್ ಖಂಡ್ರೆ ತಿಳಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More