ಜಮ್ಮು ಕಾಶ್ಮೀರದಲ್ಲಿ ಭೀಕರ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು, 28 ಮಂದಿಗೆ ಗಾಯ

|

Updated on: Sep 20, 2024 | 7:43 PM

ಜಮ್ಮು ಮತ್ತು ಕಾಶ್ಮೀರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸೈನಿಕರಿದ್ದ ಬಸ್ ಕಣಿವೆಗೆ ಉರುಳಿ ಮೂವರು ಬಿಎಸ್​ಎಫ್ ಯೋಧರು ಹುತಾತ್ಮರಾಗಿದ್ದಾರೆ. 28 ಜನರು ಗಾಯಗೊಂಡಿದ್ದಾರೆ. ಈಗಾಗಲೇ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. 

ಪುಲ್ವಾಮಾ: ಜಮ್ಮು ಕಾಶ್ಮೀರದಲ್ಲಿ ಪುಲ್ವಾಮಾದಿಂದ ಬದ್ಗಾಮ್‌ಗೆ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧರನ್ನು ಸಾಗಿಸುತ್ತಿದ್ದ ಬಸ್‌ ಅಪಘಾತದಲ್ಲಿ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು 28 ಮಂದಿ ಗಾಯಗೊಂಡಿದ್ದಾರೆ. 2ನೇ ಹಂತದ ಚುನಾವಣಾ ನಿಯೋಜನೆಗಾಗಿ ತೆರಳುತ್ತಿದ್ದ ವೇಳೆ ಬಸ್ ಅಪಘಾತಕ್ಕೀಡಾಗಿದೆ. ಗಾಯಾಳುಗಳ ನೆರವಿಗೆ ತಕ್ಷಣದ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಬಸ್ಸಿನಲ್ಲಿ ಸುಮಾರು 35 ಯೋಧರಿದ್ದರು ಎಂದು ಹೇಳಲಾಗುತ್ತಿದೆ. ಗಾಯಗೊಂಡ ಯೋಧರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಗಾಯಗೊಂಡ ಸೈನಿಕರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಖಾನ್ಸಾಹಿಬ್ ಮತ್ತು ಬದ್ಗಾಮ್ ಆಸ್ಪತ್ರೆಗಳಿಗೆ ವರ್ಗಾಯಿಸಲಾಗಿದೆ. ಅಪಘಾತದ ಸುತ್ತಲಿನ ಸಂದರ್ಭಗಳ ಬಗ್ಗೆ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ