ಮೊಬೈಲ್ ಕಸಿದುಕೊಂಡಿದ್ದಕ್ಕೆ ಕ್ಲಾಸ್​ ರೂಂನಲ್ಲೇ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು

ಮೊಬೈಲ್ ಕಸಿದುಕೊಂಡಿದ್ದಕ್ಕೆ ಕ್ಲಾಸ್​ ರೂಂನಲ್ಲೇ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು

ಸುಷ್ಮಾ ಚಕ್ರೆ
|

Updated on: Dec 13, 2024 | 7:53 PM

ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ 3 ಕಾಲೇಜು ವಿದ್ಯಾರ್ಥಿಗಳು ತಮ್ಮ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಕ್ಕಾಗಿ ತರಗತಿಯೊಳಗೇ ಶಿಕ್ಷಕರಿಗೆ ಬರ್ಬರವಾಗಿ ಇರಿದಿದ್ದಾರೆ. ಈ ಭೀಕರ ಘಟನೆ ತರಗತಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮೂವರು ವಿದ್ಯಾರ್ಥಿಗಳು ಪ್ಲಾನ್ ಮಾಡಿ ಶಿಕ್ಷಕರಿಗೆ ಚಾಕುವಿನಿಂದ ಇರಿದಿರುವುದು ವಿಡಿಯೋದಲ್ಲಿ ಕಂಡು ಬರುತ್ತಿದೆ.

ಬಹ್ರೈಚ್: ಉತ್ತರ ಪ್ರದೇಶದ ಬಹ್ರೈಚ್‌ನ ಮಿಹಿನ್‌ಪುರವದಲ್ಲಿರುವ ನವಯುಗ್ ಇಂಟರ್ ಕಾಲೇಜಿನಲ್ಲಿ ಗುರುವಾರ ಬೆಳಗ್ಗೆ ತರಗತಿಯಲ್ಲಿ ತಮ್ಮ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಮೂವರು ಕಾಲೇಜು ವಿದ್ಯಾರ್ಥಿಗಳು ತಮ್ಮ ತರಗತಿಯ ಶಿಕ್ಷಕರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ದಾಳಿಯಲ್ಲಿ ಶಿಕ್ಷಕನಿಗೆ ಗಂಭೀರವಾಗಿ ಗಾಯವಾಗಿದ್ದು, ಈ ಭೀಕರ ಘಟನೆ ತರಗತಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮೂವರು ವಿದ್ಯಾರ್ಥಿಗಳು ಪ್ಲಾನ್ ಮಾಡಿ ಶಿಕ್ಷಕರಿಗೆ ಚಾಕುವಿನಿಂದ ಇರಿದಿರುವುದು ವಿಡಿಯೋದಲ್ಲಿ ಕಂಡು ಬರುತ್ತಿದೆ.

ಇರಿತಕ್ಕೊಳಗಾದ ಶಿಕ್ಷಕನನ್ನು ರಾಜೇಂದ್ರ ಪ್ರಸಾದ್ ವರ್ಮಾ ಎಂದು ಗುರುತಿಸಲಾಗಿದೆ. ಅವರು ಪಿಯುಸಿಯ ಇಂಗ್ಲಿಷ್ ಶಿಕ್ಷಕ ಮತ್ತು ತರಗತಿ ಶಿಕ್ಷಕರಾಗಿದ್ದಾರೆ. ನಿಷೇಧದ ಹೊರತಾಗಿಯೂ ತರಗತಿಯಲ್ಲಿ ಬಳಸುತ್ತಿದ್ದ ಮೂವರು ವಿದ್ಯಾರ್ಥಿಗಳಿಂದ ಈ ಹಿಂದೆ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದರು. ಮರುದಿನ ವಿದ್ಯಾರ್ಥಿಗಳ ಪೋಷಕರ ಜೊತೆ ಬಂದು ಮೊಬೈಲ್​ಗಳನ್ನು ತೆಗೆದುಕೊಂಡು ಹೋಗುವಂತೆ ಅವರು ಸೂಚಿಸಿದ್ದರು. ಇದರಿಂದ ಕೋಪಗೊಂಡಿದ್ದ ವಿದ್ಯಾರ್ಥಿಗಳು ಸೇಡು ತೀರಿಸಿಕೊಳ್ಳಲು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ