ಶೋಪಿಯಾನ್‌ನಲ್ಲಿ ಲಷ್ಕರ್ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್‌ಕೌಂಟರ್
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಶುಕ್ರೂ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ, ಭದ್ರತಾ ಪಡೆಗಳು ಅಲ್ಲಿ ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 3 ಲಷ್ಕರ್-ಎ-ತೈಬಾ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶ್ರೀನಗರ, ಮೇ 13: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನ ಜಿನ್‌ಪಥರ್ ಕೆಲ್ಲರ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್-ಎ-ತೈಬಾ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಈ ಪ್ರದೇಶದಲ್ಲಿ ಮತ್ತೊಬ್ಬ ಭಯೋತ್ಪಾದಕ ಇರುವ ಸಾಧ್ಯತೆ ಇದೆ. ಆತನಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಮೊದಲು ಕುಲ್ಗಾಮ್‌ನಲ್ಲಿ ಎನ್‌ಕೌಂಟರ್ ಪ್ರಾರಂಭವಾಯಿತು. ನಂತರ ಕಾರ್ಯಾಚರಣೆ ಶೋಪಿಯಾನ್‌ನ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಗೊಂಡಿತು. ಸೇನೆ ಮತ್ತು ಅರೆಸೈನಿಕ ಪಡೆಗಳ ಭದ್ರತಾ ಸಿಬ್ಬಂದಿ ಸುಮಾರು 2 ಗಂಟೆಗಳ ಕಾಲ ಭಯೋತ್ಪಾದಕರ ವಿರುದ್ಧ ಹೋರಾಡಿದ್ದಾರೆ. ಗುಪ್ತಚರ ಮಾಹಿತಿಯ ನಂತರ ಭದ್ರತಾ ಪಡೆಗಳು ಭಯೋತ್ಪಾದಕರನ್ನು ತಡೆದಿವೆ.
ಕಾಶ್ಮೀರದ ಶೋಪಿಯಾನ್‌ನಲ್ಲಿ ಮೂವರು ಉಗ್ರರ ಎನ್‌ಕೌಂಟರ್ ಮಾಡಲಾಗಿದೆ. ಈನ ಕಾರ್ಯಾಚರಣೆಯಲ್ಲಿ ಲಷ್ಕರ್ ಎ ತೊಯ್ಬಾದ ಮುಖ್ಯ ಕಮಾಂಡರ್ ಲಷ್ಕರ್ ಎ ತೊಯ್ಬಾ ಮುಖ್ಯ ಕಮಾಂಡರ್ ಶಾಹಿದ್ ಕುಟ್ಟಾಯ ಭಾರತೀಯ ಸೇನಾಪಡೆಯ ಗುಂಡೇಟಿಗೆ ಬಲಿಯಾಗಿದ್ದಾನೆ. ಶೋಪಿಯಾನ್‌ನ ಹೀರ್‌ಪೋರಾ ನಿವಾಸಿಯಾಗಿದ್ದ ಶಾಹಿದ್ ಕುಟ್ಟಾಯ 2023ರ ಮಾ.8ರಂದು ಉಗ್ರ ಸಂಘಟನೆಗೆ ಸೇರಿದ್ದ. ಮೋಸ್ಟ್ ವಾಂಟೆಡ್ ಉಗ್ರರಲ್ಲಿ ಶಾಹಿದ್ ಕುಟ್ಟಾಯ ಪ್ರಮುಖನಾಗಿದ್ದ. 2024ರ ಏ.8ರಂದು ಡ್ಯಾನಿಶ್ ರೆಸಾರ್ಟ್‌ನಲ್ಲಿ ನಡೆದಿದ್ದ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರ ಶಾಹಿದ್ ಕುಟ್ಟಾಯ ಬೇಹಿ ಬಾಗ್ನ ಬಿಜೆಪಿ ಅಧ್ಯಕ್ಷ, ಟಿಎ ಸಿಬ್ಬಂದಿ ಹತ್ಯೆಯಲ್ಲೂ ಭಾಗಿಯಾಗಿದ್ದ. ಮತ್ತೊಬ್ಬ ಉಗ್ರ ಅದ್ನಾನ್ ಶಫಿ ದಾರ್ ಕೂಡ ಈ ಎನ್‌ಕೌಂಟರ್‌ನಲ್ಲಿ ಹತನಾಗಿದ್ದಾನೆ. ಹತ್ಯೆಯಾದ 3ನೇ ಉಗ್ರನ ಬಗ್ಗೆ ಇನ್ನೂ ಯಾವುದೇ ಮಾಹಿತಿ ದೊರೆತಿಲ್ಲ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ