AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು: ರೈತರಲ್ಲಿ ಆತಂಕ

ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು: ರೈತರಲ್ಲಿ ಆತಂಕ

ಪ್ರಶಾಂತ್​ ಬಿ.
| Edited By: |

Updated on: Mar 22, 2026 | 10:08 AM

Share

ಕಾಡಾನೆಗಳ ಉಪಟಳಕ್ಕೆ ಚನ್ನಪಟ್ಟಣ ತಾಲೂಕಿನ ಜನ ಬೇಸತ್ತಿರುವ ನಡುವೆಯೇ ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಡಾನೆಗಳು ಕಾಣಿಸಿಕೊಂಡಿವೆ. ಇತ್ತೀಚೆಗೆ ಒಂದು ಆನೆಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದ ಕಾರಣ ಇಲ್ಲಿನ ಜನ ಕೊಂಚ ರಿಲೀಫ್​​ ಆಗಿದ್ದರು. ಈ ನಡುವೆ ಮತ್ತೆ ಆನೆಗಳು ಪ್ರತ್ಯಕ್ಷವಾಗಿರೋದು ಆತಂಕ ಹೆಚ್ಚಿಸಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ.

ರಾಮನಗರ, ಮಾರ್ಚ್​​ 22: ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ರೈತರಲ್ಲಿ ಆತಂಕ ಸೃಷ್ಟಿಸಿವೆ. ಈಗಾಗಲೇ ಚನ್ನಪಟ್ಟಣ ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಇತ್ತೀಚೆಗೆ ಒಂದು  ಆನೆಯನ್ನ ಸೆರೆ ಹಿಡಿಯಲಾಗಿತ್ತು. ಇದರಿಂದ ಜನರು ಕೊಂಚ ನಿಟ್ಟುಸಿರು ಬಿಡುವ ನಡುವೆಯೇ ಇದೀಗ ಗ್ರಾಮದಲ್ಲಿ ಮತ್ತೆ ಮೂರು ಕಾಡಾನೆಗಳು ಕಾಣಿಸಿಕೊಂಡಿವೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಕಾಡಾನೆಗಳನ್ನು ಹಿಮ್ಮೆಟ್ಟಿಸುವ ಯತ್ನ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More