ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಬಿದ್ದ ಚಿರತೆ, ವಿಲವಿಲ ಒದ್ದಾಡಿ ಪ್ರಾಣಬಿಟ್ಟಿತು
ಕಾಡು ಹಂದಿಗೆ ಹಾಕಲಾಗಿದ್ದ ಉರುಳಿಗೆ ಚಿರತೆ ಸಿಕ್ಕು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕೇತೇನಹಳ್ಳಿ ಅರಣ್ಯದಲ್ಲಿ ನಡೆದಿದೆ. ಕೇತೇನಹಳ್ಳಿ ಅರಣ್ಯದಲ್ಲಿ ಕಾಡುಹಂದಿಗೆ ಹಾಕಿದ್ದ ಉರುಳಿಗೆ 3 ವರ್ಷದ ಹೆಣ್ಣು ಚಿರತೆ ಸಿಲುಕಿ ಒದ್ದಾಡಿದೆ. ಕೂಡಲೇ ಚಿರತೆಯನ್ನು ಉರುಳಿನಿಂದ ಬಿಡಿಸಿ ಚಿಕಿತ್ಸೆ ನೀಡಲಾಗಿದೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ತಜ್ಞರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನೆರವೇರಿಸಲಿದ್ದಾರೆ.
ಚಿಕ್ಕಬಳ್ಳಾಪುರ, (ಜನವರಿ 09): ಕಾಡು ಹಂದಿಗೆ ಹಾಕಲಾಗಿದ್ದ ಉರುಳಿಗೆ ಚಿರತೆ ಸಿಕ್ಕು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕೇತೇನಹಳ್ಳಿ ಅರಣ್ಯದಲ್ಲಿ ನಡೆದಿದೆ. ಕೇತೇನಹಳ್ಳಿ ಅರಣ್ಯದಲ್ಲಿ ಕಾಡುಹಂದಿಗೆ ಹಾಕಿದ್ದ ಉರುಳಿಗೆ 3 ವರ್ಷದ ಹೆಣ್ಣು ಚಿರತೆ ಸಿಲುಕಿ ಒದ್ದಾಡಿದೆ. ಕೂಡಲೇ ಚಿರತೆಯನ್ನು ಉರುಳಿನಿಂದ ಬಿಡಿಸಿ ಚಿಕಿತ್ಸೆ ನೀಡಲಾಗಿದೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ತಜ್ಞರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನೆರವೇರಿಸಲಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jan 09, 2026 07:01 PM
Latest Videos

