ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ವಿಮಾನದಲ್ಲಿ ಬಂದವರ ಬಳಿ ಇತ್ತು ಆಮೆಗಳು ಸೇರಿ 35 ವನ್ಯಜೀವಿ! ಮೂವರ ಬಂಧನ
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿದ್ದ 35 ವನ್ಯಜೀವಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯನ್ನು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ್ದು, ಮೂವರನ್ನು ಬಂಧಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ ಮತ್ತು ಕಸ್ಟಮ್ಸ್ ಕಾಯ್ದೆ ಅಡಿ ಕ್ರಮ ಕೈಗೊಳ್ಳಲಾಗಿದೆ.
ಬೆಂಗಳೂರು, ಜನವರಿ 21: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿದ್ದ 35 ವನ್ಯಜೀವಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ಈ ಪ್ರಾಣಿಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಕಸ್ಟಮ್ಸ್ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ. ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಮತ್ತು ಕಸ್ಟಮ್ಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಇಷ್ಟೊಂದು ಸುಲಭವಾಗಿ ಈ ವನ್ಯಜೀವಿಗಳನ್ನು ಹೇಗೆ ಸಾಗಿಸಲಾಯಿತು ಎಂಬ ಬಗ್ಗೆ ಕಸ್ಟಮ್ಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
