ಬ್ಯಾಂಕಾಕ್​ನಿಂದ ಬೆಂಗಳೂರಿಗೆ‌ ವಿಮಾನದಲ್ಲಿ ಬಂದವರ ಬಳಿ ಇತ್ತು ಆಮೆಗಳು ಸೇರಿ 35 ವನ್ಯಜೀವಿ! ಮೂವರ ಬಂಧನ

Edited By:

Updated on: Jan 21, 2026 | 1:38 PM

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿದ್ದ 35 ವನ್ಯಜೀವಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯನ್ನು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ್ದು, ಮೂವರನ್ನು ಬಂಧಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ ಮತ್ತು ಕಸ್ಟಮ್ಸ್ ಕಾಯ್ದೆ ಅಡಿ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು, ಜನವರಿ 21: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿದ್ದ 35 ವನ್ಯಜೀವಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ಈ ಪ್ರಾಣಿಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಕಸ್ಟಮ್ಸ್ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ. ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಮತ್ತು ಕಸ್ಟಮ್ಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಇಷ್ಟೊಂದು ಸುಲಭವಾಗಿ ಈ ವನ್ಯಜೀವಿಗಳನ್ನು ಹೇಗೆ ಸಾಗಿಸಲಾಯಿತು ಎಂಬ ಬಗ್ಗೆ ಕಸ್ಟಮ್ಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More