ಇನ್ಸ್ ಪೆಕ್ಟರ್ ನ ಕಾಮಕಾಂಡವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಸಂತ್ರಸ್ತೆ ಯುವತಿ
ಬೆಂಗಳೂರಿನ ಡಿ.ಜೆ. ಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುನೀಲ್ ವಿರುದ್ಧದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯ ಹೇಳಿಕೆ ಮತ್ತು ಅವರ ನಡುವೆ ನಡೆದ ಚಾಟಿಂಗ್ ವಿವರಗಳು ಈಗ ಬಹಿರಂಗಗೊಂಡಿದ್ದು, ಪ್ರಕರಣಕ್ಕೆ ಮತ್ತಷ್ಟು ತಿರುವು ನೀಡಿವೆ. ಇನ್ಸ್‌ಪೆಕ್ಟರ್ ಸುನೀಲ್ ಅವರು ಮದುವೆಯಾಗುವುದಾಗಿ ನಂಬಿಸಿ ತನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂಬ ಸಂತ್ರಸ್ತೆಯ ದೂರಿನ ಸತ್ಯಾಂಶಗಳನ್ನು ಈ ಚಾಟ್‌ಗಳು ಬಿಚ್ಚಿಟ್ಟಿವೆ.
ಬೆಂಗಳೂರು (ಅ.22): ಬೆಂಗಳೂರಿನ ಡಿ.ಜೆ. ಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುನೀಲ್ ವಿರುದ್ಧದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯ ಹೇಳಿಕೆ ಮತ್ತು ಅವರ ನಡುವೆ ನಡೆದ ಚಾಟಿಂಗ್ ವಿವರಗಳು ಈಗ ಬಹಿರಂಗಗೊಂಡಿದ್ದು, ಪ್ರಕರಣಕ್ಕೆ ಮತ್ತಷ್ಟು ತಿರುವು ನೀಡಿವೆ. ಇನ್ಸ್‌ಪೆಕ್ಟರ್ ಸುನೀಲ್ ಅವರು ಮದುವೆಯಾಗುವುದಾಗಿ ನಂಬಿಸಿ ತನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂಬ ಸಂತ್ರಸ್ತೆಯ ದೂರಿನ ಸತ್ಯಾಂಶಗಳನ್ನು ಈ ಚಾಟ್‌ಗಳು ಬಿಚ್ಚಿಟ್ಟಿವೆ. ಇನ್ನು ಈ ಬಗ್ಗೆ ಡಿಜಿ ಮತ್ತು ಐಜಿಪಿ ಕಚೇರಿಗೆ ದೂರು ನೀಡಿದ್ದು ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಪೊಲೀಸಪ್ಪನ ಕಾಮಕಾಂಡವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

