ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಸಿನಿಮೀಯ ರೀತಿ ಅಪಘಾತ: ಇಲ್ಲಿದೆ ಮೈಜುಮ್ ಎನ್ನಿಸುವ ದೃಶ್ಯ

Edited By:

Updated on: Nov 24, 2025 | 6:39 PM

ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೈವೇನಲ್ಲಿ (Bengaluru-Chennai Expressway) ಕಾರು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಕೋಲಾರದ ಮಾಲೂರು (Maluru) ತಾಲೂಕಿನ ಅಬ್ಬೇನಹಳ್ಳಿ ಬಳಿ ನಡೆದಿದೆ. ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೈವೇಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹುಂಡೈ ವರ್ನಾ ಕಾರು ಡಿವೈಡರ್‌ಗೆ ಡಿಕ್ಕಿಯಾಗಿದೆ. ಬಳಿಕ ಕಾರು ಬ್ರಿಡ್ಜ್ ನಿಂದ ಕೆಳಗೆ ಬಿದ್ದಿದೆ. ಈ ದುರ್ಘಟನೆಯಲ್ಲಿ ಗೋಪಿ (38), ಗೌತಮ್ ರಮೇಶ್ (28), ಹರಿಹರನ್ (27), ಜಯಂಕರ್ (30) ಮೃತಟ್ಟಿದ್ದು, ಇವರೆಲ್ಲರೂ ಚೆನ್ನೈ ಮೂಲದವರು ಎಂದು ತಿಳಿದುಬಂದಿದೆ. ಇನ್ನು ಅಪಘಾತದ ಭೀಕರತೆ ನೋಡಿದರೆ ಮೈಜುನ್ ಅನ್ನಿಸುತ್ತದೆ. ಹಾಗಾದ್ರೆ, ಕಾರು ಹೇಗಾಗಿದೆ ಎನ್ನುವುದನ್ನು ನಮ್ಮ ಕೋಲಾರ ಪ್ರತಿನಿಧಿ ರಾಜೇಂದ್ರಸಿಂಹ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

ಕೋಲಾರ, (ನವೆಂಬರ್ 24): ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೈವೇನಲ್ಲಿ (Bengaluru-Chennai Expressway) ಕಾರು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಕೋಲಾರದ ಮಾಲೂರು (Maluru) ತಾಲೂಕಿನ ಅಬ್ಬೇನಹಳ್ಳಿ ಬಳಿ ನಡೆದಿದೆ. ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೈವೇಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹುಂಡೈ ವರ್ನಾ ಕಾರು ಡಿವೈಡರ್‌ಗೆ ಡಿಕ್ಕಿಯಾಗಿದೆ. ಬಳಿಕ ಕಾರು ಬ್ರಿಡ್ಜ್ ನಿಂದ ಕೆಳಗೆ ಬಿದ್ದಿದೆ. ಈ ದುರ್ಘಟನೆಯಲ್ಲಿ ಗೋಪಿ (38), ಗೌತಮ್ ರಮೇಶ್ (28), ಹರಿಹರನ್ (27), ಜಯಂಕರ್ (30) ಮೃತಟ್ಟಿದ್ದು, ಇವರೆಲ್ಲರೂ ಚೆನ್ನೈ ಮೂಲದವರು ಎಂದು ತಿಳಿದುಬಂದಿದೆ. ಇನ್ನು ಅಪಘಾತದ ಭೀಕರತೆ ನೋಡಿದರೆ ಮೈಜುನ್ ಅನ್ನಿಸುತ್ತದೆ. ಹಾಗಾದ್ರೆ, ಕಾರು ಹೇಗಾಗಿದೆ ಎನ್ನುವುದನ್ನು ನಮ್ಮ ಕೋಲಾರ ಪ್ರತಿನಿಧಿ ರಾಜೇಂದ್ರಸಿಂಹ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

Loading...
Unable to load recommendations.
Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More