AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಹ್ರಾಡೂನ್-ದೆಹಲಿ ಹೈವೇಯಲ್ಲಿ ಭೀಕರ ಅಪಘಾತ; ಕಾರಿನ ಮೇಲೆ ಟ್ರಕ್ ಬಿದ್ದು ನಾಲ್ವರ ಸಾವು, ಮಗು ಪಾರಾಗಿದ್ದೇ ಪವಾಡ!

ಡೆಹ್ರಾಡೂನ್-ದೆಹಲಿ ಹೈವೇಯಲ್ಲಿ ಭೀಕರ ಅಪಘಾತ; ಕಾರಿನ ಮೇಲೆ ಟ್ರಕ್ ಬಿದ್ದು ನಾಲ್ವರ ಸಾವು, ಮಗು ಪಾರಾಗಿದ್ದೇ ಪವಾಡ!

ಸುಷ್ಮಾ ಚಕ್ರೆ
|

Updated on: Nov 04, 2026 | 10:40 PM

Share

ವೇಗವಾಗಿ ಚಲಿಸುತ್ತಿದ್ದ ಕಂಟೇನರ್ ಟ್ರಕ್‌ನ ಚಾಲಕ ತೀವ್ರ ವೇಗದ ಕಾರಣದಿಂದ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದಾನೆ. ಈ ವೇಳೆ ಅದೇ ಮಾರ್ಗವಾಗಿ ಸಾಗುತ್ತಿದ್ದ ಕಾರಿನ ಮೇಲೆ ಟ್ರಕ್ ಪಲ್ಟಿಯಾಗಿದೆ. ಕಂಟೇನರ್‌ನ ಭಾರಿ ತೂಕಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕಾರು ಸಂಪೂರ್ಣವಾಗಿ ಜಜ್ಜಲ್ಪಟ್ಟಿದ್ದರೂ, ಅದರಲ್ಲಿದ್ದ ಸಣ್ಣ ಮಗುವಿಗೆ ಯಾವುದೇ ಪ್ರಾಣಾಪಾಯವಾಗದೆ ಪವಾಡಸದೃಶವಾಗಿ ಸಣ್ಣಪುಟ್ಟ ಗಾಯಗಳೊಂದಿಗೆ ಬದುಕಿ ಹೊರಬಂದಿದೆ.

ಡೆಹ್ರಾಡೂನ್, ನವೆಂಬರ್ 4: ಡೆಹ್ರಾಡೂನ್-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತೀವ್ರ ವೇಗವಾಗಿ ಬಂದ ಕಂಟೇನರ್ ಟ್ರಕ್ ನಿಯಂತ್ರಣ ತಪ್ಪಿ ಕಾರಿನ ಮೇಲೆ ಮಗುಚಿ ಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ಸಣ್ಣ ಮಗುವೊಂದು ಪವಾಡಸದೃಶ ರೀತಿಯಲ್ಲಿ ಸಾವಿನಿಂದ ಪಾರಾಗಿದೆ. ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯ ಮನ್ಸೂರ್‌ಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ.

ವೇಗವಾಗಿ ಚಲಿಸುತ್ತಿದ್ದ ಕಂಟೇನರ್ ಟ್ರಕ್‌ನ ಚಾಲಕ ತೀವ್ರ ವೇಗದ ಕಾರಣದಿಂದ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದಾನೆ. ಈ ವೇಳೆ ಅದೇ ಮಾರ್ಗವಾಗಿ ಸಾಗುತ್ತಿದ್ದ ಕಾರಿನ ಮೇಲೆ ಟ್ರಕ್ ಪಲ್ಟಿಯಾಗಿದೆ. ಕಂಟೇನರ್‌ನ ಭಾರಿ ತೂಕಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಆದರೆ, ಕಾರು ಸಂಪೂರ್ಣವಾಗಿ ಜಜ್ಜಲ್ಪಟ್ಟಿದ್ದರೂ, ಅದರಲ್ಲಿದ್ದ ಸಣ್ಣ ಮಗುವಿಗೆ ಯಾವುದೇ ಪ್ರಾಣಾಪಾಯವಾಗದೆ ಪವಾಡಸದೃಶವಾಗಿ ಸಣ್ಣಪುಟ್ಟ ಗಾಯಗಳೊಂದಿಗೆ ಬದುಕಿ ಹೊರಬಂದಿದೆ. ಮಗುವನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More