AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಹುಲಿಗೆ ಇಟ್ಟಿದ್ದ ಬೋನಿಗೆ ಬಿದ್ದ 4 ವರ್ಷದ ಚಿರತೆ

ಚಾಮರಾಜನಗರ: ಹುಲಿಗೆ ಇಟ್ಟಿದ್ದ ಬೋನಿಗೆ ಬಿದ್ದ 4 ವರ್ಷದ ಚಿರತೆ

ಸೂರಜ್ ಪ್ರಸಾದ್ ಎಸ್ಎನ್
| Edited By: |

Updated on: Apr 08, 2026 | 4:12 PM

Share

ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದಲ್ಲಿ ಹುಲಿ ಸೆರೆಗೆ ಇಟ್ಟಿದ್ದ ಬೋನಿಗೆ 4 ವರ್ಷದ ಚಿರತೆ ಬಿದ್ದಿದೆ. ಹೀಗಿದ್ದರೂ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಹುಲಿ ದಾಳಿ ಆತಂಕ ಮಾತ್ರ ಹಾಗೇ ಉಳಿದುಕೊಂಡಿದೆ. ಬೋನಿಗೆ ಬಿದ್ದ ಚಿರತೆಯನ್ನು ಸುರಕ್ಷಿತ ಪ್ರದೇಶಕ್ಕೆ ಬಿಡುವುದಾಗಿ ಅರಣ್ಯ ಇಲಾಖೆಯ ಸಿಬ್ಬಂದಿ ತಿಳಿಸಿದ್ದಾರೆ.

ಚಾಮರಾಜನಗರ, ಏಪ್ರಿಲ್​​ 08: ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದ ಮಹದೇವಸ್ವಾಮಿ ಎಂಬವರ ಜಮೀನಿನಲ್ಲಿ ಹುಲಿ ಸೆರೆಗೆ ಇಟ್ಟಿದ್ದ ಬೋನಿಗೆ 4 ವರ್ಷದ ಚಿರತೆ ಬಿದ್ದಿರುವ ಘಟನೆ ನಡೆದಿದೆ. ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಪಡಗೂರಿನಲ್ಲಿ ಕಳೆದ 10 ದಿನದಿಂದ ಹುಲಿ ಮತ್ತು ಚಿರತೆಗಳ ಓಡಾಟ ಕಂಡುಬಂದಿತ್ತು. ಈ ಹಿನ್ನೆಲೆ ಹುಲಿಯ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಬೋನ್​​ ಇಟ್ಟಿದ್ದರು. ಬೋನಿಗೆ ಬಿದ್ದ ಚಿರತೆಯನ್ನು ಸುರಕ್ಷಿತ ಪ್ರದೇಶಕ್ಕೆ ಬಿಡುವುದಾಗಿ ಅರಣ್ಯ ಇಲಾಖೆಯ ಸಿಬ್ಬಂದಿ ತಿಳಿಸಿದ್ದಾರೆ. ಈಗ ಚಿರತೆ ಬೋನಿಗೆ ಬಿದ್ದರೂ ಹುಲಿ ದಾಳಿ ಆತಂಕ ಮಾತ್ರ ಗ್ರಾಮಸ್ಥರಲ್ಲಿ ಹಾಗೇ ಉಳಿದುಕೊಂಡಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Follow Us
ಸೂರಜ್ ಪ್ರಸಾದ್ ಎಸ್ಎನ್
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More