‘45’ ಸಿನಿಮಾ ಪ್ರೀಮಿಯರ್ ಶೋ: ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ಫ್ಯಾನ್ಸ್ ಸಂಭ್ರಮ ನೋಡಿ

Updated on: Dec 24, 2025 | 9:15 PM

ಶಿವರಾಜ್​​ಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ ಅವರು ‘45’ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸ್ಟಾರ್ ಹೀರೋಗಳ ಅಭಿಮಾನಿಗಳು ಚಿತ್ರಮಂದಿರಗಳ ಎದುರು ಜೋರಾಗಿ ಸಂಭ್ರಮಿಸುತ್ತಿದ್ದಾರೆ. ಈಗಾಗಲೇ ‘45’ ಚಿತ್ರ ನೋಡಿದ ಅಭಿಮಾನಿಗಳು ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಫ್ಯಾನ್ಸ್ ಸಂಭ್ರಮದ ವಿಡಿಯೋ ನೋಡಿ..

ಅರ್ಜುನ್ ಜನ್ಯ ಅವರು ನಿರ್ದೇಶನ ಮಾಡಿರುವ ‘45’ ಸಿನಿಮಾ (45 Kannada Movie) ಬಿಡುಗಡೆ ಆಗುತ್ತಿದೆ. ಒಂದು ದಿನ ಮೊದಲೇ ಪ್ರೀಮಿಯರ್ ಶೋ ಮಾಡಲಾಗಿದೆ. ಬೆಂಗಳೂರಿನ ಹಲವು ಕಡೆಗಳಲ್ಲಿ ಪ್ರೀಮಿಯರ್ ಶೋ ನಡೆದಿದೆ. ಅಭಿಮಾನಿಗಳು ಭಾರಿ ಉತ್ಸಾಹದಲ್ಲಿ ಬಂದು ಸಿನಿಮಾ ನೋಡುತ್ತಿದ್ದಾರೆ. ಶಿವರಾಜ್​​ಕುಮಾರ್, ರಾಜ್ ಬಿ. ಶೆಟ್ಟಿ, ಉಪೇಂದ್ರ (Upendra) ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಈ ಸ್ಟಾರ್ ನಟರ ಅಭಿಮಾನಿಗಳು ಚಿತ್ರಮಂದಿರಗಳ ಎದುರು ಜೋರಾಗಿ ಸಂಭ್ರಮಿಸುತ್ತಿದ್ದಾರೆ. ಈಗಾಗಲೇ ‘45’ ಸಿನಿಮಾ ನೋಡಿದ ಅಭಿಮಾನಿಗಳು ಪಾಸಿಟಿವ್ ಪ್ರತಿಕ್ರಿಯೆ ನೀಡುತ್ತಿದ್ದಾರೆ. ರಮೇಶ್ ರೆಡ್ಡಿ ಅವರು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಅರ್ಜುನ್ ಜನ್ಯ (Arjun Janya) ಅವರ ಚೊಚ್ಚಲ ನಿರ್ದೇಶನಕ್ಕೆ ಜನರಿಂದ ಮೆಚ್ಚುಗೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.