ಇಡೀ ಕರ್ನಾಟಕವನ್ನೇ ನಡುಗಿಸಿದ 4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್

Edited By:

Updated on: May 15, 2026 | 11:23 PM

ಕೆಲವು ತಿಂಗಳುಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪ್ರಚಾರ, ದೊಡ್ಡ ಕಾರ್ಯಕ್ರಮ, ಹೆಚ್ಚಿನ ಬಡ್ಡಿದರದ ಭರವಸೆ ಹಾಗೂ ವಿವಾದಾತ್ಮಕ ಭಾಷಣಗಳ ಮೂಲಕ ಚರ್ಚೆಗೆ ಗ್ರಾಸವಾಗಿದ್ದ ಶಿವಂ ಅಸೋಸಿಯೇಟ್ ಸಂಸ್ಥೆ ಇದೀಗ ತನಿಖೆಯ ಕೇಂದ್ರಬಿಂದುವಾಗಿದ್ದು, ಬೆಳಗಾವಿಯಲ್ಲಿ 4500 ಕೋಟಿ ರೂಪಾಯಿ ವಂಚನೆ ಆರೋಪ ಪ್ರಕರಣದಲ್ಲಿ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣನವರ್‌ ನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ, (ಮೇ 15): ಕೆಲವು ತಿಂಗಳುಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪ್ರಚಾರ, ದೊಡ್ಡ ಕಾರ್ಯಕ್ರಮ, ಹೆಚ್ಚಿನ ಬಡ್ಡಿದರದ ಭರವಸೆ ಹಾಗೂ ವಿವಾದಾತ್ಮಕ ಭಾಷಣಗಳ ಮೂಲಕ ಚರ್ಚೆಗೆ ಗ್ರಾಸವಾಗಿದ್ದ ಶಿವಂ ಅಸೋಸಿಯೇಟ್ (shivam associates) ಸಂಸ್ಥೆ ಮಾಲೀಕನಿಗೆ ಸಂಕಷ್ಟ ಎದುರಾಗಿದೆ. ಬೆಳಗಾವಿಯಲ್ಲಿ 4500 ಕೋಟಿ ರೂಪಾಯಿ ವಂಚನೆ ಆರೋಪ ಪ್ರಕರಣದಲ್ಲಿ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣನವರ್‌ (Shivanand Neelannavar) ನನ್ನು ಪೊಲೀಸರು ಬಂಧಿಸಿದ್ದಾರೆ.

ನಿನ್ನೆ(ಮೇ 15) ಅಷ್ಟೇ ಬೆಳಗಾವಿಯ ಶಿವಬಸವ ನಗರದಲ್ಲಿರುವ ಕಚೇರಿ ಸೇರಿದಂತೆ ಎರಡು ಕಡೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಲಾಗಿತ್ತು. ಕಚೇರಿಗಳಲ್ಲಿದ್ದ ಹಣಕಾಸು ವ್ಯವಹಾರಗಳ ದಾಖಲೆಗಳು, ಹೂಡಿಕೆ ವಿವರಗಳು, ಸಾರ್ವಜನಿಕರಿಂದ ಸಂಗ್ರಹಿಸಿರುವ ಹಣದ ಮಾಹಿತಿ ಹಾಗೂ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸಿ ಬಳಿಕ ಇಂದು (ಮೇ 15) ಶಿವಾನಂದ ನೀಲಣ್ಣನವರ್‌ ವಿರುದ್ಧ ಐಎಫ್​​ಐಆರ್ ದಾಖಲಿಸಿದ್ದು, ಇದೀಗ ಮಾಳಮಾರುತಿ ಠಾಣೆ ಪೊಲೀಸರು ಶಿವಾನಂದ ನೀಲಣ್ಣನವರ್‌ ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಇದನ್ನೂ ಓದಿ: ನಾನು ಸಿಎಂ ಆಗ್ಲಾ? ಎಂದವನ ಬಂಡವಾಳ ಬಯಲು: 4500 ಕೋಟಿ ವಂಚಿಸಿದ ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಸೀಜ್

Published on: May 15, 2026 11:18 PM
Follow Us
Sahadev Mane