AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿಯಲ್ಲಿ ಹೋಟೆಲ್​ಗಳ ಮೇಲೆ ದಿಢೀರ್ ದಾಳಿ: ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ

ಯಾದಗಿರಿಯಲ್ಲಿ ಹೋಟೆಲ್​ಗಳ ಮೇಲೆ ದಿಢೀರ್ ದಾಳಿ: ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ

ಗಣಪತಿ ಶರ್ಮಾ
|

Updated on: Mar 13, 2026 | 10:37 AM

Share

ಹೋಟೆಲ್​ಗಳಿಗೆ ಎಲ್​ಪಿಜಿ ಸಿಲಿಂಡರ್ಗಳ ಲಭ್ಯತೆ ಇಲ್ಲದೇ ಇರುವುದು ಸಮಸ್ಯೆ ಒಂದೆಡೆಯಾದರೆ, ಮತ್ತೊಂದೆಡೆ ಯಾದಗಿರಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಾಣಿಜ್ಯ ಉದ್ದೇಶಗಳಿಗೆ ಅಕ್ರಮವಾಗಿ ಬಳಸಲಾಗುತ್ತಿದ್ದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಅಕ್ರಮವಾಗಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬಳಸಿದ ಹೋಟೆಲ್ ಮಾಲೀಕರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಯಾದಗಿರಿ, ಮಾರ್ಚ್ 13: ಕರ್ನಾಟಕದ ಯಾದಗಿರಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಮಾರ್ಚ್ 12 ರಂದು ಹೋಟೆಲ್‌ಗಳ ದಿಢೀರ್ ದಾಳಿ ನಡೆಸಿ ವಾಣಿಜ್ಯ ಉದ್ದೇಶಗಳಿಗೆ ಅಕ್ರಮವಾಗಿ ಬಳಸಲಾಗುತ್ತಿದ್ದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದ ವಿವಿಧ ಹೋಟೆಲ್ ಮತ್ತು ಆಹಾರ ಮಳಿಗೆಗಳಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು ಒಟ್ಟು 46 ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ಪತ್ತೆಹಚ್ಚಿ ಜಪ್ತಿ ಮಾಡಿದ್ದಾರೆ. ಗೃಹಬಳಕೆಗೆ ಮೀಸಲಾದ ಸಿಲಿಂಡರ್‌ಗಳನ್ನು ವಾಣಿಜ್ಯ ಬಳಕೆಗೆ ಬಳಸುತ್ತಿರುವ ಬಗ್ಗೆ ಬಂದ ಮಾಹಿತಿ ಆಧರಿಸಿ ಈ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂಥ ಅಕ್ರಮಗಳ ವಿರುದ್ಧ ಇದೀಗ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More