ರಸ್ತೆ ಅಪಘಾತ; 5 ಜನ ಸಾವು, ಇಲ್ಲಿದೆ ಎದೆ ಝಲ್ ಎನ್ನಿಸುವ ವಿಡಿಯೋ
ವೇಗವಾಗಿ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ತಮಿಳುನಾಡಿನ ವಿರುದುನಗರ- ಮದುರೈ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಇದೀಗ ಈ ಅಪಘಾತದ ಸಿಸಿಟಿವಿ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ.
ತಿರುಮಂಗಲಂ, ಏ.10: ತಮಿಳುನಾಡಿನ ( Tamil Nadu) ತಿರುಮಂಗಲಂ ಬಳಿ ನಡೆದ ಭೀಕರ ಅಪಘಾತದಲ್ಲಿ 5 ಜನ ಸಾವನ್ನಪ್ಪಿದ್ದಾರೆ. ವೇಗವಾಗಿ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ವಿರುದುನಗರ- ಮದುರೈ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಇದೀಗ ಈ ಅಪಘಾತದ ಸಿಸಿಟಿವಿ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಲ್ಲಾಪುರಂ ಮೂಲದ ಕನಗವೇಲ್ ಎಂಬುವವರು ತಮ್ಮ ಕುಟುಂಬದೊಂದಿಗೆ ತಲವೈಪುರಂರುವ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದರು. ಇದೇ ವೇಳೆ ಕಾರು ವಿರುದುನಗರ- ಮದುರೈ ಹೆದ್ದಾರಿ ಬಳಿ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸವಾರ ಮಣಿಕಂದಂ ಅವರಿಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಲಿಸುತ್ತಿದ್ದ ರಸ್ತೆಯಿಂದ ಮತ್ತೊಂದು ಬದಿಯ ರಸ್ತೆಗೆ ಹಾರಿ ಬಂದು ಬಿದ್ದಿದೆ. ಕನಗವೇಲ್, ಅವರ ಪತ್ನಿ ಕೃಷ್ಣಕುಮಾರಿ, ಅವರ ಸಂಬಂಧಿಕರಾದ ನಾಗಜೋತಿ ಮತ್ತು ಎಂಟು ವರ್ಷದ ಬಾಲಕಿ ಹಾಗೂ ದ್ವಿಚಕ್ರ ವಾಹನ ಸವಾರ ಪಾಂಡಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯ ಕುರಿತು ಕಲ್ಲಕುರಿಚಿ ಪೊಲೀಸ್ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಈ ಭೀಕರ ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ಇದೀಗ ವೈರಲ್ ಆಗಿವೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ

