ರಸ್ತೆ ಅಪಘಾತ; 5 ಜನ ಸಾವು, ಇಲ್ಲಿದೆ ಎದೆ ಝಲ್​​ ಎನ್ನಿಸುವ ವಿಡಿಯೋ

Updated on: Apr 10, 2024 | 2:47 PM

ವೇಗವಾಗಿ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ತಮಿಳುನಾಡಿನ ವಿರುದುನಗರ- ಮದುರೈ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಇದೀಗ ಈ ಅಪಘಾತದ ಸಿಸಿಟಿವಿ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ.

ತಿರುಮಂಗಲಂ, ಏ.10: ತಮಿಳುನಾಡಿನ ( Tamil Nadu) ತಿರುಮಂಗಲಂ ಬಳಿ ನಡೆದ ಭೀಕರ ಅಪಘಾತದಲ್ಲಿ 5 ಜನ ಸಾವನ್ನಪ್ಪಿದ್ದಾರೆ. ವೇಗವಾಗಿ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ವಿರುದುನಗರ- ಮದುರೈ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಇದೀಗ ಈ ಅಪಘಾತದ ಸಿಸಿಟಿವಿ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ವಿಲ್ಲಾಪುರಂ ಮೂಲದ ಕನಗವೇಲ್ ಎಂಬುವವರು ತಮ್ಮ ಕುಟುಂಬದೊಂದಿಗೆ ತಲವೈಪುರಂರುವ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದರು. ಇದೇ ವೇಳೆ ಕಾರು ವಿರುದುನಗರ- ಮದುರೈ ಹೆದ್ದಾರಿ ಬಳಿ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸವಾರ ಮಣಿಕಂದಂ ಅವರಿಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಲಿಸುತ್ತಿದ್ದ ರಸ್ತೆಯಿಂದ ಮತ್ತೊಂದು ಬದಿಯ ರಸ್ತೆಗೆ ಹಾರಿ ಬಂದು ಬಿದ್ದಿದೆ. ಕನಗವೇಲ್, ಅವರ ಪತ್ನಿ ಕೃಷ್ಣಕುಮಾರಿ, ಅವರ ಸಂಬಂಧಿಕರಾದ ನಾಗಜೋತಿ ಮತ್ತು ಎಂಟು ವರ್ಷದ ಬಾಲಕಿ ಹಾಗೂ ದ್ವಿಚಕ್ರ ವಾಹನ ಸವಾರ ಪಾಂಡಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯ ಕುರಿತು ಕಲ್ಲಕುರಿಚಿ ಪೊಲೀಸ್ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಈ ಭೀಕರ ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ಇದೀಗ ವೈರಲ್ ಆಗಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More