ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಲಾರಿ- 4 ಕಾರುಗಳ ನಡುವೆ ಸರಣಿ ಅಪಘಾತ

Updated on: Nov 30, 2025 | 5:16 PM

ಬೆಂಗಳೂರು-ಚೆನ್ನೈ ಹೆದ್ದಾರಿ ಗಡಿಭಾಗ ತಮಿಳುನಾಡಿನ ಪೆರಂಡಪಲ್ಲಿ ಲಾರಿ ಹಾಗೂ 4 ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿವೆ. ಅಪಘಾತದ ರಭಸಕ್ಕೆ ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಸರಣಿ ಅಪಘಾತದಿಂದ ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಬೆಂಗಳೂರು, (ನವೆಂಬರ್ 30): ಬೆಂಗಳೂರು-ಚೆನ್ನೈ ಹೆದ್ದಾರಿ ಗಡಿಭಾಗ ತಮಿಳುನಾಡಿನ ಪೆರಂಡಪಲ್ಲಿ ಲಾರಿ ಹಾಗೂ 4 ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿವೆ. ಅಪಘಾತದ ರಭಸಕ್ಕೆ ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಸರಣಿ ಅಪಘಾತದಿಂದ ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಕೂಡಲೇ ಸ್ಥಳ ಆಗಮಿಸಿದ ಪೊಲೀಸರು, ಅಪಘಾತಕ್ಕೀಡಾದ ಕಾರುಗಳನ್ನು ಕ್ರೇನ್​ಗಳ ಮೂಲಕ ಹೆದ್ದಾರಿಯಿಂದ ತೆರವು ಮಾಡಿ ಸಂಚಾರ ಅನುವು ಮಾಡಿಕೊಟ್ಟರು.

Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More