ಪ್ರಧಾನಿ ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಈ ವರ್ಷ ಛತ್ತೀಸ್ಗಢ ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 134 ನಕ್ಸಲರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಅವರಲ್ಲಿ 118 ಜನರನ್ನು ಬಸ್ತಾರ್ ವಿಭಾಗವೊಂದರಲ್ಲೇ ನಿರ್ಮೂಲನೆ ಮಾಡಲಾಗಿದೆ. ನಕ್ಸಲರು ಚಳುವಳಿಯನ್ನು ತೊರೆದು ಮುಖ್ಯವಾಹಿನಿಗೆ ಸೇರುವುದನ್ನು ತಡೆಯಲು ಸರ್ಕಾರದ ನೀತಿಯ ಪ್ರಕಾರ ಅವರಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದು ಎಸ್‌ಪಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡುವ ಕೆಲವು ಗಂಟೆಗಳ ಮೊದಲು ಶರಣಾಗತಿ ನಡೆದಿದೆ.
ಬಸ್ತಾರ್, ಮಾರ್ಚ್ 30: 68 ಲಕ್ಷ ರೂ.ಗಳ ಬಹುಮಾನ ಘೋಷಿಸಲಾಗಿದ್ದ 14 ಮಂದಿ ಸೇರಿದಂತೆ 50 ನಕ್ಸಲರು ಇಂದು ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶರಣಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಛತ್ತೀಸ್ಗಢಕ್ಕೆ (Chhattisgarh) ಪ್ರಧಾನಿ ನರೇಂದ್ರ ಮೋದಿ (PM Narendra Modi) ಭೇಟಿ ನೀಡುವ ಕೆಲವೇ ಗಂಟೆಗಳ ಮೊದಲು ನಕ್ಸಲರು ಶರಣಾಗಿದ್ದಾರೆ. ಅವರು ರಾಜ್ಯ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಹಿರಿಯ ಅಧಿಕಾರಿಗಳ ಮುಂದೆ ಶಸ್ತ್ರಾಸ್ತ್ರಗಳನ್ನು ತ್ಯಜಿಸಿದ್ದಾರೆ. ಶರಣಾದ 50 ಜನರಲ್ಲಿ 6 ಜನರನ್ನು ಹಿಡಿದುಕೊಟ್ಟವರಿಗೆ ತಲಾ 8 ಲಕ್ಷ ರೂ.ಗಳ ಬಹುಮಾನ ಘೋಷಿಸಲಾಗಿತ್ತು. ಅದರಲ್ಲಿ ಮೂವರಿಗೆ ತಲಾ 5 ಲಕ್ಷ ರೂ.ಗಳ ಬಹುಮಾನವಿತ್ತು. ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ), ಬಸ್ತಾರ್ ಫೈಟರ್ಸ್, ವಿಶೇಷ ಕಾರ್ಯಪಡೆ (ಎಸ್‌ಟಿಎಫ್), ಸಿಆರ್‌ಪಿಎಫ್ ಮತ್ತು ಅದರ ಗಣ್ಯ ಘಟಕ ಕೋಬ್ರಾ (ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) ನಕ್ಸಲರ ಶರಣಾಗತಿಯಲ್ಲಿ ಪ್ರಮುಖ ಪಾತ್ರ ವಹಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ