ಶಕ್ತಿ ಯೋಜನೆಯಡಿ 500 ಕೋಟಿ ಪ್ರಯಾಣ: ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣದ ಸಂಖ್ಯೆ 500 ಕೋಟಿ ದಾಟಿದೆ. ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಈ ಯೋಜನೆ ಕಾಂಗ್ರೆಸ್ ಸರ್ಕಾರದ ಐದು ಉಚಿತ ಗ್ಯಾರಂಟಿಗಳಲ್ಲಿ ಒಂದಾಗಿದೆ. 500ನೇ ಕೋಟಿಯ ಟಿಕೆಟ್ ಅನ್ನು ಸಿಎಂ ಸಿದ್ದರಾಮಯ್ಯ ವಿತರಣೆ ಮಾಡಿದರು.
ಬೆಂಗಳೂರು, ಜುಲೈ 14: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಯಡಿ ಮಹಿಳೆಯರು ಈವರೆಗೆ ಒಟ್ಟು 500 ಕೋಟಿ ಪ್ರಯಾಣ ಮಾಡಿದರು. 500ನೇ ಕೋಟಿಯ ಟಿಕೆಟ್ ಅನ್ನು ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ವಿತರಣೆ ಮಾಡಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ರಾಮಲಿಂಗಾರೆಡ್ಡಿ ಸಿಎಂಗೆ ಸಾಥ್ ನೀಡಿದರು.
