ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ; ವಿಡಿಯೋ ವೈರಲ್

Updated on: Feb 18, 2026 | 9:01 PM

ಸ್ನೇಹಿತರೊಂದಿಗೆ ನಿರಾಳವಾಗಿ ಆಡುತ್ತಿದ್ದಾಗ ಮತ್ತೊಬ್ಬರು ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಯ್‌ಪುರದಲ್ಲಿ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಹೃದಯಾಘಾತದಿಂದ 55 ವರ್ಷದ ಉದ್ಯಮಿ ಸಾವನ್ನಪ್ಪಿದ್ದಾರೆ. ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪರೀಕ್ಷೆ ಮಾಡಿದ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಹಠಾತ್ ಹೃದಯ ಸ್ತಂಭನವೇ ಸಾವಿಗೆ ಕಾರಣ ಎಂದು ಹೇಳಲಾಗಿದೆ.

ರಾಯ್‌ಪುರ, ಫೆಬ್ರವರಿ 18: ರಾಯ್‌ಪುರದ ಅಶ್ವಿನಿ ನಗರದ ಉದ್ಯಮಿ ತನ್ನ ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಹೃದಯಘಾತದಿಂದ (Heart Attack) ಮೃತಪಟ್ಟಿದ್ದಾರೆ. ಗೆಳೆಯರೊಂದಿಗೆ ಎಂಜಾಯ್ ಮಾಡುತ್ತಾ ಆಟವಾಡುತ್ತಿದ್ದ ಅವರು ಕೈಯಲ್ಲಿ ಬ್ಯಾಡ್ಮಿಂಟನ್ ಬ್ಯಾಟ್ ಹಿಡಿದುಕೊಂಡೇ ಮೃತಪಟ್ಟಿದ್ದಾರೆ. ಆದರೆ ಮುಂದಿನ ಕ್ಷಣದಲ್ಲಿ ಎಲ್ಲವೂ ಮೌನವಾಯಿತು. 57 ವರ್ಷದ ಹಾರ್ಡ್‌ವೇರ್ ಉದ್ಯಮಿ ಅಮೃತ್ ಬಜಾಜ್ ಸಂಜೆ ಆಟವಾಡಲು ಅಶ್ವಿನಿ ನಗರದ ಮೈದಾನಕ್ಕೆ ಬಂದಿದ್ದರು. ಈ ವೇಳೆ ದುರಂತವಾಗಿ ಮೃತಪಟ್ಟಿದ್ದಾರೆ. ಮೈದಾನದಲ್ಲಿ ಅವರು ಹೊಡೆದ ಅದ್ಭುತ ಶಾಟ್ ಅವರ ಜೀವನದ ಕೊನೆಯ ಶಾಟ್ ಆಗಲಿದೆ ಎಂದು ಯಾರಿಗೂ ತಿಳಿದಿರಲಿಲ್ಲ.

ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪರೀಕ್ಷೆ ಮಾಡಿದ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಹಠಾತ್ ಹೃದಯ ಸ್ತಂಭನವೇ ಸಾವಿಗೆ ಕಾರಣ ಎಂದು ಹೇಳಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More