AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಪುಣ್ಯಸ್ಮರಣೆ: ನಟನ ಸ್ಮಾರಕಕ್ಕೆ ವಿಶೇಷ ಪೂಜೆ

ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಪುಣ್ಯಸ್ಮರಣೆ: ನಟನ ಸ್ಮಾರಕಕ್ಕೆ ವಿಶೇಷ ಪೂಜೆ

ರಾಜೇಶ್ ದುಗ್ಗುಮನೆ
|

Updated on:Oct 29, 2026 | 12:01 PM

Share

ಪುನೀತ್ ರಾಜ್​​ಕುಮಾರ್ ಅವರ ಪುಣ್ಯಸ್ಮರಣೆ ನಿಮಿತ್ತ ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ವಿಶೇಷ ಪೂಜೆ ಸಲ್ಲಿಕೆ ಮಾಡಲಾಗಿದೆ. ಈ ವಿಡಿಯೋ ವೈರಲ್ ಆಗಿದೆ. ಪುನೀತ್ ಕುಟುಂಬದವರು ಆಗಮಿಸಿ ವಿಶೇಷ ನಮನ ಸಲ್ಲಿಕೆ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ. ಮೇಲಿನ ವಿಡಿಯೋ ನೋಡಿ.

ಪುನೀತ್ ರಾಜ್​ಕುಮಾರ್ ಅವರು ನಿಧನ ಹೊಂದಿ ಇಂದಿಗೆ (ಅಕ್ಟೋಬರ್ 29) ಐದು ವರ್ಷಗಳಾಗಿವೆ. ಅವರ ಅಂತಿಮ ಸಂಸ್ಕಾರವನ್ನು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿಸಲಾಗಿತ್ತು. ಇಂದು ಅವರ ಸ್ಮಾರಕಕ್ಕೆ ಹೂವಿನ ಅಲಂಕಾರ ಮಾಡಲಾಗಿದೆ. ಅವರ ಸಮಾಧಿಯ ದರ್ಶನ ಪಡೆಯಲು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದಾರೆ. ಅವರ ಕುಟುಂಬದವರು ಆಗಮಿಸಿ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಈ ಸಂದರ್ಭದ ಲೈವ್ ವಿಡಿಯೋ ಇಲ್ಲಿದೆ. ಪುನೀತ್ ಅವರು 2021ರ ಅಕ್ಟೋಬರ್ 29ರಂದು ನಿಧನ ಹೊಂದಿದರು. ತೀವ್ರ ಹೃದಯಾಘಾತದಿಂದ ಅವರು ಮೃತಪಟ್ಟರು. ಅವರು ಇಲ್ಲ ಎಂಬ ನೋವು ಅಭಿಮಾನಿಗಳನ್ನು ಈಗಲೂ ಕಾಡುತ್ತಾ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Oct 29, 2026 11:42 AM

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More