ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಪುಣ್ಯಸ್ಮರಣೆ: ನಟನ ಸ್ಮಾರಕಕ್ಕೆ ವಿಶೇಷ ಪೂಜೆ
ಪುನೀತ್ ರಾಜ್ಕುಮಾರ್ ಅವರ ಪುಣ್ಯಸ್ಮರಣೆ ನಿಮಿತ್ತ ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ವಿಶೇಷ ಪೂಜೆ ಸಲ್ಲಿಕೆ ಮಾಡಲಾಗಿದೆ. ಈ ವಿಡಿಯೋ ವೈರಲ್ ಆಗಿದೆ. ಪುನೀತ್ ಕುಟುಂಬದವರು ಆಗಮಿಸಿ ವಿಶೇಷ ನಮನ ಸಲ್ಲಿಕೆ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ. ಮೇಲಿನ ವಿಡಿಯೋ ನೋಡಿ.
ಪುನೀತ್ ರಾಜ್ಕುಮಾರ್ ಅವರು ನಿಧನ ಹೊಂದಿ ಇಂದಿಗೆ (ಅಕ್ಟೋಬರ್ 29) ಐದು ವರ್ಷಗಳಾಗಿವೆ. ಅವರ ಅಂತಿಮ ಸಂಸ್ಕಾರವನ್ನು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿಸಲಾಗಿತ್ತು. ಇಂದು ಅವರ ಸ್ಮಾರಕಕ್ಕೆ ಹೂವಿನ ಅಲಂಕಾರ ಮಾಡಲಾಗಿದೆ. ಅವರ ಸಮಾಧಿಯ ದರ್ಶನ ಪಡೆಯಲು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದಾರೆ. ಅವರ ಕುಟುಂಬದವರು ಆಗಮಿಸಿ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಈ ಸಂದರ್ಭದ ಲೈವ್ ವಿಡಿಯೋ ಇಲ್ಲಿದೆ. ಪುನೀತ್ ಅವರು 2021ರ ಅಕ್ಟೋಬರ್ 29ರಂದು ನಿಧನ ಹೊಂದಿದರು. ತೀವ್ರ ಹೃದಯಾಘಾತದಿಂದ ಅವರು ಮೃತಪಟ್ಟರು. ಅವರು ಇಲ್ಲ ಎಂಬ ನೋವು ಅಭಿಮಾನಿಗಳನ್ನು ಈಗಲೂ ಕಾಡುತ್ತಾ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Oct 29, 2026 11:42 AM
Loading...
Unable to load recommendations.
Follow Us
