ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ

Updated on: Feb 27, 2026 | 9:14 PM

ರಾಜಸ್ಥಾನದ ಬಲೋತ್ರಾ ಬಳಿ ಬಸ್ ಅಪಘಾತಕ್ಕೀಡಾಗಿ 6 ​​ಜನರು ಸಾವನ್ನಪ್ಪಿದ್ದಾರೆ. ಇಂದು ಸಂಜೆ 4 ಗಂಟೆ ಸುಮಾರಿಗೆ ಸ್ಲೀಪರ್ ಬಸ್ ಓವರ್‌ಟೇಕ್ ಮಾಡಲು ಪ್ರಯತ್ನಿಸುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಟ್ರೇಲರ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಬಸ್ ಜೋಧ್‌ಪುರದಿಂದ ಸಂಚೋರ್‌ಗೆ ಪ್ರಯಾಣಿಸುತ್ತಿದ್ದಾಗ, ಟ್ರೇಲರ್ ಜೋಧ್‌ಪುರದ ಕಡೆಗೆ ಹೋಗುತ್ತಿತ್ತು. 

ಜೈಪುರ, ಫೆಬ್ರವರಿ 27: ರಾಜಸ್ಥಾನದ ಬಲೋತ್ರಾ ಜಿಲ್ಲೆಯ ಸರ್ವಾಡಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-25ರಲ್ಲಿ ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ (Accident) 6 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಸಂಜೆ 4 ಗಂಟೆ ಸುಮಾರಿಗೆ ಸ್ಲೀಪರ್ ಬಸ್ ಓವರ್‌ಟೇಕ್ ಮಾಡಲು ಪ್ರಯತ್ನಿಸುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಟ್ರೇಲರ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಬಸ್ ಜೋಧ್‌ಪುರದಿಂದ ಸಂಚೋರ್‌ಗೆ ಪ್ರಯಾಣಿಸುತ್ತಿದ್ದಾಗ, ಟ್ರೇಲರ್ ಜೋಧ್‌ಪುರದ ಕಡೆಗೆ ಹೋಗುತ್ತಿತ್ತು. ಬಸ್​ನ ಕೆಲವು ಭಾಗಗಳಲ್ಲಿ ರಕ್ತ ಹರಡಿಕೊಂಡಿದ್ದು, ಹಲವಾರು ಶವಗಳು ಒಳಗೆ ಸಿಲುಕಿಕೊಂಡಿರುವುದು ಕಂಡುಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Feb 27, 2026 09:13 PM
Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More