AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫತೇಪುರದಲ್ಲಿ ಬೆಂಕಿ ಅವಘಡ; 65 ಅಂಗಡಿಗಳ 3 ಕೋಟಿ ರೂ. ಮೌಲ್ಯದ ಪಟಾಕಿಗಳು ಸುಟ್ಟು ಭಸ್ಮ

ಫತೇಪುರದಲ್ಲಿ ಬೆಂಕಿ ಅವಘಡ; 65 ಅಂಗಡಿಗಳ 3 ಕೋಟಿ ರೂ. ಮೌಲ್ಯದ ಪಟಾಕಿಗಳು ಸುಟ್ಟು ಭಸ್ಮ

ಸುಷ್ಮಾ ಚಕ್ರೆ
|

Updated on: Oct 20, 2025 | 10:46 PM

Share

ಉತ್ತರ ಪ್ರದೇಶದ ಪಟಾಕಿ ಮಾರುಕಟ್ಟೆಯಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ 65 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಫತೇಪುರದಲ್ಲಿ ಪಟಾಕಿ ಮಾರುಕಟ್ಟೆ ಸುಟ್ಟು ಭಸ್ಮವಾಗಿದೆ. ಈ ವೇಳೆ 3 ಕೋಟಿ ರೂಪಾಯಿ ಮೌಲ್ಯದ ಪಟಾಕಿಗಳು ಸುಟ್ಟು ಹೋಗಿವೆ. ಬೆಂಕಿ ಹೊತ್ತಿಕೊಂಡು ಪಟಾಕಿಗಳು ಸಿಡಿಯತೊಡಗಿದಂತೆ 2 ಕಿಲೋಮೀಟರ್ ವರೆಗೆ ಶಬ್ದ ಕೇಳಿಬಂದಿದೆ. 50ಕ್ಕೂ ಹೆಚ್ಚು ವಾಹನಗಳಿಗೆ ಹಾನಿಯಾಗಿದೆ.

ಫತೇಪುರ, ಅಕ್ಟೋಬರ್ 20: ಉತ್ತರ ಪ್ರದೇಶದ ಪಟಾಕಿ ಮಾರುಕಟ್ಟೆಯಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ 65 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಫತೇಪುರದಲ್ಲಿ ಪಟಾಕಿ (Firecrackers) ಮಾರುಕಟ್ಟೆ ಸುಟ್ಟು ಭಸ್ಮವಾಗಿದೆ. ಈ ವೇಳೆ 3 ಕೋಟಿ ರೂಪಾಯಿ ಮೌಲ್ಯದ ಪಟಾಕಿಗಳು ಸುಟ್ಟು ಹೋಗಿವೆ. ಬೆಂಕಿ ಹೊತ್ತಿಕೊಂಡು ಪಟಾಕಿಗಳು ಸಿಡಿಯತೊಡಗಿದಂತೆ 2 ಕಿಲೋಮೀಟರ್ ವರೆಗೆ ಶಬ್ದ ಕೇಳಿಬಂದಿದೆ. 50ಕ್ಕೂ ಹೆಚ್ಚು ವಾಹನಗಳಿಗೆ ಹಾನಿಯಾಗಿದೆ. ಆದರೆ, ಸ್ಥಳದಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More