ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ, ಯಾರ ಅಕೌಂಟ್​​​​​ನಿಂದ?

Edited By:

Updated on: Feb 27, 2026 | 3:25 PM

ಸಿದ್ದರಾಮಯ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ (Guaranatee Scheme) ಗೃಹ ಲಕ್ಷ್ಮೀ ಯೋಜನೆ ಸಹ ಒಂದಾಗಿದ್ದು, ಮನೆ ಯಜಮಾನಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡಲಾಗುತ್ತಿದೆ. ಆದ್ರೆ, ಸತ್ತವರ ಅಕೌಂಟ್​​​ಗೆ ಗೃಹ ಲಕ್ಷ್ಮೀ ಯೋಜನೆ ಹಣ ಪಾವತಿಯಾಗಿರುವುದು ಬೆಳಕಿಗೆ ಬಂದಿದೆ. ಇದರಿಂದ ಈ ಯೋಜನೆ ಇದೀಗ ಸರ್ಕಾರವನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎನ್ನಲಾಗಿದೆ. ಹೀಗಾಗಿ ಸರ್ಕಾರ, ಸತ್ತವರ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮೀ ಹಣವನ್ನು ವಾಪಸ್ ಪಡೆದುಕೊಳ್ಳಲು ಮುಂದಾಗಿದೆ.

ಬೆಂಗಳೂರು, (ಫೆಬ್ರವರಿ 27): ಸಿದ್ದರಾಮಯ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ (Guaranatee Scheme) ಗೃಹ ಲಕ್ಷ್ಮೀ ಯೋಜನೆ ಸಹ ಒಂದಾಗಿದ್ದು, ಮನೆ ಯಜಮಾನಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡಲಾಗುತ್ತಿದೆ. ಆದ್ರೆ, ಸತ್ತವರ ಅಕೌಂಟ್​​​ಗೆ  (Bank Account) ಗೃಹ ಲಕ್ಷ್ಮೀ ಯೋಜನೆ ಹಣ ಪಾವತಿಯಾಗಿರುವುದು ಬೆಳಕಿಗೆ ಬಂದಿದೆ. ಇದರಿಂದ ಈ ಯೋಜನೆ ಇದೀಗ ಸರ್ಕಾರವನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎನ್ನಲಾಗಿದೆ. ಹೀಗಾಗಿ ಸರ್ಕಾರ, ಸತ್ತವರ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮೀ ಹಣವನ್ನು ವಾಪಸ್ ಪಡೆದುಕೊಳ್ಳಲು ಮುಂದಾಗಿದೆ.

ಬರೋಬ್ಬರಿ 69 ಸಾವಿರ ಸತ್ತವರ ಬ್ಯಾಂಕ್ ಖಾತೆಗಳಿಗೆ  79 ಕೋಟಿ ರೂ. ಗೃಹಲಕ್ಷ್ಮಿ ಹಣ ಪಾವತಿ ಆಗಿರುವುದನ್ನು ಸರ್ಕಾರ ಪತ್ತೆ ಮಾಡಿದ್ದು, ಈ ಹಣವನ್ನು ಇದೀಗ ವಾಪಸ್ ಪಡೆದುಕೊಳ್ಳಲು ಸರ್ಕಾರ, ಬ್ಯಾಂಕ್ ಅಧಿಕಾರಿಗಳ ಜೊತೆಯೂ ಸಂಪರ್ಕ ಸಾಧಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 27, 2026 03:00 PM
Loading...
Unable to load recommendations.
Follow Us
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More