69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ಯಾರಿಗೆಲ್ಲ ಸಿಕ್ಕಿದೆ ನ್ಯಾಷನಲ್​ ಅವಾರ್ಡ್​? ಇಲ್ಲಿದೆ ಲೈವ್​ ವಿಡಿಯೋ

Updated on: Aug 24, 2023 | 5:27 PM

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಇಂದು (ಆಗಸ್ಟ್​ 24) ಘೋಷಣೆ ಆಗುತ್ತಿದೆ. ದೆಹಲಿಯ ನ್ಯಾಷನಲ್​ ಮೀಡಿಯಾ ಸೆಂಟರ್​ನಲ್ಲಿ ಪ್ರಶಸ್ತಿ ಪ್ರಕಟ ಮಾಡಲಾಗುತ್ತಿದೆ. ವಿವಿಧ ಭಾಷೆಯ ಹಲವು ಸಿನಿಮಾಗಳಿಗೆ ಪ್ರಶಸ್ತಿ ಘೋಷಿಸಲಾಗುತ್ತಿದೆ. ಯಾವ ವಿಭಾಗದಲ್ಲಿ ಯಾರಿಗೆ ಪ್ರಶಸ್ತಿ ಸಿಕ್ಕಿದೆ ಎಂಬುದನ್ನು ತಿಳಿಯಲು ಈ ಲೈವ್​ ವಿಡಿಯೋ ನೋಡಿ..

ಭಾರತ ಸರ್ಕಾರ ನೀಡುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಅಪಾರ ಮನ್ನಣೆ ಇದೆ. ಒಮ್ಮೆಯಾದರೂ ನ್ಯಾಷನಲ್​ ಅವಾರ್ಡ್​ ಪಡೆಯಬೇಕು ಎಂಬುದು ಪ್ರತಿಯೊಬ್ಬರ ಕನಸು. ಪ್ರತಿ ವರ್ಷ ರಾಷ್ಟ್ರ ಪ್ರಶಸ್ತಿ ಘೋಷಣೆ ಆಗುವಾಗಲೂ ಕುತೂಹಲ ಗರಿಗೆದರಿರುತ್ತದೆ. 69ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಇಂದು (ಆಗಸ್ಟ್​ 24) ಘೋಷಣೆ ಆಗುತ್ತಿದೆ. ದೆಹಲಿಯ ನ್ಯಾಷನಲ್​ ಮೀಡಿಯಾ ಸೆಂಟರ್​ನಲ್ಲಿ ಪ್ರಶಸ್ತಿ ಪ್ರಕಟ ಮಾಡಲಾಗುತ್ತಿದೆ. ವಿವಿಧ ಭಾಷೆಯ ಹಲವು ಸಿನಿಮಾಗಳಿಗೆ ಪ್ರಶಸ್ತಿ ಘೋಷಿಸಲಾಗುತ್ತಿದೆ. ಯಾವ ವಿಭಾಗದಲ್ಲಿ ಯಾರಿಗೆ ಪ್ರಶಸ್ತಿ ಸಿಕ್ಕಿದೆ ಎಂಬುದನ್ನು ತಿಳಿಯಲು ಈ ಲೈವ್​ ವಿಡಿಯೋ ನೋಡಿ. 2021ನೇ ಸಾಲಿನಲ್ಲಿ ಬಿಡುಗಡೆಯಾದ ಮತ್ತು ಸೆನ್ಸಾರ್​ ಪ್ರಮಾಣ ಪತ್ರ ಪಡೆದ ಸಿನಿಮಾಗಳಿಗೆ 2023ರಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published on: Aug 24, 2023 05:27 PM
Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More