ಕಾಬೂಲ್‌ನಲ್ಲಿ ಭೀಕರ ಸ್ಫೋಟ; 7 ಮಂದಿ ಸಾವು, 13 ಜನರಿಗೆ ಗಾಯ
ಕಾಬೂಲ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ 7 ಜನರು ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೊಡ್ಡ ಕಚೇರಿ ಕಟ್ಟಡಗಳು, ಶಾಪಿಂಗ್ ಕಾಂಪ್ಲೆಕ್ಸ್ ಮತ್ತು ರಾಯಭಾರ ಕಚೇರಿಗಳನ್ನು ಹೊಂದಿರುವ ಪ್ರದೇಶದಲ್ಲೇ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಈ ಸ್ಫೋಟ ನಡೆದ ಶಹರ್-ಎ-ನಾವ್ ಕಾಬೂಲ್‌ನ ಸುರಕ್ಷಿತ ಭಾಗಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಈ ಸ್ಫೋಟದ ಜವಾಬ್ದಾರಿಯನ್ನು ಯಾವುದೇ ಗುಂಪು ಹೊತ್ತುಕೊಂಡಿಲ್ಲ.
ಕಾಬೂಲ್, ಜನವರಿ 19: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ (Blast) 7 ಜನರು ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೊಡ್ಡ ಕಚೇರಿ ಕಟ್ಟಡಗಳು, ಶಾಪಿಂಗ್ ಕಾಂಪ್ಲೆಕ್ಸ್ ಮತ್ತು ರಾಯಭಾರ ಕಚೇರಿಗಳನ್ನು ಹೊಂದಿರುವ ಪ್ರದೇಶದಲ್ಲೇ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಈ ಸ್ಫೋಟ ನಡೆದ ಶಹರ್-ಎ-ನಾವ್ ಕಾಬೂಲ್‌ನ ಸುರಕ್ಷಿತ ಭಾಗಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಈ ಸ್ಫೋಟದ ಜವಾಬ್ದಾರಿಯನ್ನು ಯಾವುದೇ ಗುಂಪು ಹೊತ್ತುಕೊಂಡಿಲ್ಲ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Jan 19, 2026 09:27 PM