ಬೆಂಗಳೂರಿನಲ್ಲಿ ಮಂಗಳಮುಖಿಯರ ಅಟ್ಟಹಾಸ: ಜೊತೆಗಾತಿಯ ತಲೆಬೋಳಿಸಿ ಮನಸೋ ಇಚ್ಛೆ ಹಲ್ಲೆ

Updated on: Oct 31, 2025 | 7:55 PM

ಮಂಗಳಮುಖಿಯರ ಗ್ಯಾಂಗ್ ತಮ್ಮ ಜೊತೆಗಾತಿಯನ್ನು ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿ ಪುಂಡಾಟ ಮೆರೆದಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿ ವಿರಾಟ್ ನಗರದಲ್ಲಿ ನಡೆದಿದೆ. ಸುಕನ್ಯಾ ಎಂಬ ಮಂಗಳಮುಖಿಯ ತಲೆಬೋಳಿಸಿ ಹಲ್ಲೆ ಮಾಡಿ ವಿಕೃತಿ ಮರೆದಿದೆ. ತಮ್ಮ ಟೀಂ ಬಿಟ್ಟು ಬೇರೊಂದು ತಂಡ ಜೊತೆಗೆ ಹೋಗಿದ್ದಕ್ಕೆ ಆಕ್ರೋಶಗೊಂಡ ಪ್ರೀತಿ, ಚಿನ್ನಿ ಮಂಗಳಮುಖಿಯರ ತಂಡ ಸುಕನ್ಯಾಳನ್ನ ಕೆಆರ್ ಪುರದಿಂದ ಆಟೋದಲ್ಲಿ ಕಿಡ್ನ್ಯಾಪ್ ಮಾಡಿಕೊಂಡು ಬಂದು ಬೊಮ್ಮನಹಳ್ಳಿಗೆ ಕರೆದೊಯ್ದು ಹಲ್ಲೆ ಮಾಡಿದೆ.

ಬೆಂಗಳೂರು, (ಅಕ್ಟೋಬರ್ 31): ಮಂಗಳಮುಖಿಯರ ಗ್ಯಾಂಗ್ ತಮ್ಮ ಜೊತೆಗಾತಿಯನ್ನು ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿ ಪುಂಡಾಟ ಮೆರೆದಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿ ವಿರಾಟ್ ನಗರದಲ್ಲಿ ನಡೆದಿದೆ. ಸುಕನ್ಯಾ ಎಂಬ ಮಂಗಳಮುಖಿಯ ತಲೆಬೋಳಿಸಿ ಹಲ್ಲೆ ಮಾಡಿ ವಿಕೃತಿ ಮರೆದಿದೆ. ತಮ್ಮ ಟೀಂ ಬಿಟ್ಟು ಬೇರೊಂದು ತಂಡ ಜೊತೆಗೆ ಹೋಗಿದ್ದಕ್ಕೆ ಆಕ್ರೋಶಗೊಂಡ ಪ್ರೀತಿ, ಚಿನ್ನಿ ಮಂಗಳಮುಖಿಯರ ತಂಡ ಸುಕನ್ಯಾಳನ್ನ ಕೆಆರ್ ಪುರದಿಂದ ಆಟೋದಲ್ಲಿ ಕಿಡ್ನ್ಯಾಪ್ ಮಾಡಿಕೊಂಡು ಬಂದು ಬೊಮ್ಮನಹಳ್ಳಿಗೆ ಕರೆದೊಯ್ದು ಹಲ್ಲೆ ಮಾಡಿದೆ.

ಸುಕನ್ಯಾ ಕೈಮುಗಿದು ಬೇಡಿಕೊಂಡ್ರು ಸಹ ಎಲ್ಲರೂ ಸೇರಿ ಹಿಟ್ಟಿನ ದೊಣ್ಣೆ , ಸೌಟು, ಸೇರಿದಂತೆ ಕೈಗೆ ಸಿಕ್ಕ ವಸ್ತುಗಳಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡುವುದನ್ನು ವಿಡಿಯೋ ಕಾಲ್ ಮಾಡಿ ಮತ್ತೊಬ್ಬ ಮಂಗಳಮುಖಿಗೆ ತೋರಿಸಿದ್ದು, ಸದ್ಯ ಈ ವಿಡಿಯೋ ಕಾಲ್ ವಿಡಿಯೋ ವೈರಲ್ ಆಗಿದೆ. ಇದರ ಬೆನ್ನಲ್ಲೇ ಬೊಮ್ಮನಹಳ್ಳಿ ಪೊಲೀಸರು ಸೊಮೋಟೋ ಕೇಸ್ ದಾಖಲಿಸಿಕೊಂಡು 7 ಮಂಗಳಮುಖಿಯರನ್ನು ಬಂಧಿಸಿದ್ದಾರೆ.

Loading...
Unable to load recommendations.
Follow Us