ಹಾಸನ: ಧಾರಾಕಾರ ಮಳೆಗೆ ಬಿದ್ದ ಬೃಹತ್ ಗಾತ್ರದ ಮರ, 700 ವರ್ಷ ಹಳೆಯ ಮಠದ ಕಟ್ಟಡ ಹಾನಿ
ಹಾಸನದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಧಾರಾಕಾರ ಮಳೆಗೆ ಬೃಹತ್ ಗಾತ್ರದ ಮರವೊಂದು 700 ವರ್ಷ ಹಳೆಯ ಮಠದ ಮೇಲೆ ಬಿದ್ದಿದೆ. ಮಠದಲ್ಲಿ ಯಾರೂ ಇಲ್ಲದಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಹಳೆಯ ಮಠ ಮಳೆಗಾಲದಲ್ಲಿ ಸೋರುತ್ತಿದ್ದರಿಂದ ಮಠದ ಪೀಠಾಧ್ಯಕ್ಷ ಶ್ರೀ ಸಂಗಮೇಶ್ವರ ಸ್ವಾಮೀಜಿ ಬೇರೆಡೆ ತಂಗುತ್ತಿದ್ದರು.
ಹಾಸನ, ಜುಲೈ.24: ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಧಾರಾಕಾರ ಮಳೆಗೆ ನಗರದ ಸಂಗಮೇಶ್ವರ ಬಡಾವಣೆಯ ಜವೇನಹಳ್ಳಿ ಮಠದ ಈಶ್ವರ ದೇಗುಲದ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದೆ. ಮರ ಬಿದ್ದ ಪರಿಣಾಮ ಮಠದ ಕಟ್ಟಡ ಹಾಗೂ ದೇಗುಲಕ್ಕೆ ಹಾನಿಯಾಗಿದೆ. ಮಠದಲ್ಲಿ ಯಾರೂ ಇಲ್ಲದಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಹಳೆಯ ಮಠ ಮಳೆಗಾಲದಲ್ಲಿ ಸೋರುತ್ತಿದ್ದರಿಂದ ಮಠದ ಪೀಠಾಧ್ಯಕ್ಷ ಶ್ರೀ ಸಂಗಮೇಶ್ವರ ಸ್ವಾಮೀಜಿ ಬೇರೆಡೆ ತಂಗುತ್ತಿದ್ದರು. ಸದ್ಯ 700 ವರ್ಷ ಹಳೆಯದಾದ ಜವೇನಹಳ್ಳಿ ಮಠ ದುರಸ್ತಿ ಮಾಡುವಂತೆ ಭಕ್ತಾಧಿಗಳು ಆಗ್ರಹಿಸಿದ್ದಾರೆ.
ಹಾಸನ, ಸಕಲೇಶಪುರ, ಆಲೂರು, ಬೇಲೂರು ಭಾಗದಲ್ಲಿ ಮಳೆ ಜೋರಾಗಿದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ವಿದ್ಯಾರ್ಥಿಗಳು, ವಾಹನ ಸವಾರರು ಪರದಾಡುವಂತಾಗಿದೆ.
ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Published on: Jul 24, 2024 11:11 AM
Latest Videos