70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..

Updated on: Oct 08, 2024 | 4:14 PM

ದೆಹಲಿಯಲ್ಲಿ ಇಂದು (ಅಕ್ಟೋಬರ್​ 8) ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು 70ನೇ ಸಾಲಿನ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳನ್ನು ಪ್ರದಾನ ಮಾಡುತ್ತಿದ್ದಾರೆ. ರಿಷಬ್​ ಶೆಟ್ಟಿ, ನಿತ್ಯಾ ಮೆನನ್, ಮಾನಸಿ ಪರೇಖ್, ಅರಿಜಿತ್ ಸಿಂಗ್, ಎಆರ್​ ರೆಹಮಾನ್, ನೀನಾ ಗುಪ್ತಾ, ಮನೋಜ್ ಬಾಜ್​ಪಾಯಿ, ಮಿಥುನ್ ಚಕ್ರವರ್ತಿ ಮುಂತಾದವರು ಪ್ರಶಸ್ತಿ ಸ್ವೀಕರಿಸುತ್ತಿದ್ದಾರೆ. ಕಾರ್ಯಕ್ರಮದ ಲೈವ್​ ವಿಡಿಯೋ ಇಲ್ಲಿದೆ ನೋಡಿ..

70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಯಲ್ಲಿ ಕನ್ನಡಿಗರಿಗೆ ಹೆಮ್ಮೆ ಆಗಿದೆ. ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ‘ಅತ್ಯುತ್ತಮ ನಟ’ ನ್ಯಾಷನಲ್​ ಅವಾರ್ಡ್​ ಪಡೆದಿದ್ದಾರೆ. ಕನ್ನಡದ ಹುಡುಗಿ ನಿತ್ಯಾ ಮೆನನ್​ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಲ್ಲಿ ಇಂದು (ಅ.8) ರಾಷ್ಟ್ರ ಪ್ರಶಸ್ತಿಗಳನ್ನು ಪ್ರದಾನ ಮಾಡುತ್ತಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭದ ಲೈವ್​ ವಿಡಿಯೋ ಇಲ್ಲಿದೆ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More