ಜಿಲ್ಲಾಧಿಕಾರಿ ಕಚೇರಿಯೆದುರು ನಮಾಜ್ ಮಾಡಿದ ವೃದ್ಧೆ; ಸೆಕ್ಯುರಿಟಿ ಸಸ್ಪೆಂಡ್

Updated on: Apr 03, 2025 | 10:27 PM

ಉತ್ತರ ಪ್ರದೇಶದ ಹಮೀರ್‌ಪುರದ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ನಮಾಜ್ ಮಾಡಿದ 71 ವರ್ಷದ ಮಹಿಳೆಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ವೇಳೆ ಕರ್ತವ್ಯದಲ್ಲಿದ್ದ ಸೆಕ್ಯುರಿಟಿ ಸಿಬ್ಬಂದಿಯನ್ನು ಕೂಡ ಅಮಾನತುಗೊಳಿಸಲಾಗಿದೆ. ಆ ವೃದ್ಧೆ ನಮಾಜ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ.

ನವದೆಹಲಿ, ಏಪ್ರಿಲ್ 3: ದೇಶಾದ್ಯಂತ ಸೋಮವಾರ ಈದ್ (Eid 2025) ಆಚರಿಸಲಾಗಿತ್ತು. ಇದೇ ವೇಳೆ ಜಿಲ್ಲಾಧಿಕಾರಿ ಕಚೇರಿಯ ಮುಂದೆ 71 ವರ್ಷದ ಮಹಿಳೆಯೊಬ್ಬರು ‘ನಮಾಜ್’ (Namaz) ಸಲ್ಲಿಸಿದರು. ಈಗಾಗಲೇ ಉತ್ತರ ಪ್ರದೇಶ ಸರ್ಕಾರ ರಸ್ತೆಗಳು, ಫುಟ್​ಪಾತ್​ನಲ್ಲಿ ನಮಾಜ್ ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿದೆ. ಆದರೆ, ಮುನ್ನಿ ಎಂದು ಗುರುತಿಸಲಾದ ವೃದ್ಧೆ ಹಮೀರ್‌ಪುರದ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ನಮಾಜ್ ಮಾಡಿದರು. ಹೀಗಾಗಿ ಅವರ ಮೇಲೆ ಕೇಸ್ ದಾಖಲಿಸಲಾಗಿದೆ ಮತ್ತು ಆ ವೇಳೆ ಕರ್ತವ್ಯದಲ್ಲಿದ್ದ ಸೆಕ್ಯುರಿಟಿಯನ್ನು ಅಮಾನತುಗೊಳಿಸಲಾಗಿದೆ.

ಸರ್ಕಾರಿ ಸ್ಥಳದಲ್ಲಿ ನಮಾಜ್ ಮಾಡುತ್ತಿರುವ ಮಹಿಳೆಯ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಗುಲಾಬಿ ಸಲ್ವಾರ್  ಮತ್ತು ತಲೆ ಮತ್ತು ತೋಳುಗಳನ್ನು ಮುಚ್ಚುವ ಉದ್ದನೆಯ ಸ್ಕಾರ್ಫ್ ಧರಿಸಿ, ಅವರು ನೆಲದ ಮೇಲೆ ಕುಳಿತು ನಮಾಜ್ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ