73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿ ಯೋಗಪಟುಗಳನ್ನು ದಂಗಾಗಿಸಿದ ತಮಿಳುನಾಡು ರಾಜ್ಯಪಾಲ
73 ವರ್ಷದ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಮಧುರೈನಲ್ಲಿ ನಡೆದ ಯೋಗ ದಿನಾಚರಣೆಯ ಸಂದರ್ಭದಲ್ಲಿ 51 ಪುಷ್-ಅಪ್‌ಗಳೊಂದಿಗೆ ಜನಸಮೂಹವನ್ನು ಅಚ್ಚರಿಗೊಳಿಸಿದರು. 73 ವರ್ಷದ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ, ಮಧುರೈನಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂದರ್ಭದಲ್ಲಿ ಯೋಗ ಅವಧಿಯ ನಂತರ ಸತತ 51 ಪುಷ್-ಅಪ್‌ಗಳನ್ನು ಮಾಡುವ ಮೂಲಕ 10,000ಕ್ಕೂ ಹೆಚ್ಚು ಯೋಗಾಸಕ್ತರನ್ನು ಬೆರಗುಗೊಳಿಸಿದರು.
ಮಧುರೈ, ಜೂನ್ 21: ಇಂದು ದೇಶಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು (International Yoga Day) ಆಯೋಜಿಸಲಾಗಿದೆ. ತಮಿಳುನಾಡಿನ ಮಧುರೈನಲ್ಲಿ ನಡೆದ ಕಾರ್ಯಕ್ರಮದಲ್ಲಿ 73 ವರ್ಷದ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ (RN Ravi) ಕೂಡ ಪಾಲ್ಗೊಂಡಿದ್ದರು. ಈ ವೇಳೆ ಅವರು ಮಧುರೈನಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದ 10,000ಕ್ಕೂ ಹೆಚ್ಚು ಯೋಗಾಸಕ್ತರನ್ನು ಬೆರಗುಗೊಳಿಸಿದರು. “ಒಂದು ಭೂಮಿಗಾಗಿ ಯೋಗ, ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಥೀಮ್‌ನೊಂದಿಗೆ 11ನೇ ಅಂತಾರಾಷ್ಟ್ರೀಯ ಯೋಗ ದಿನದ ಜಾಗತಿಕ ಆಚರಣೆಯ ಭಾಗವಾಗಿ ಈ ಕಾರ್ಯಕ್ರಮವನ್ನು ಇಂದು ಬೆಳಿಗ್ಗೆ ವೇಲಮ್ಮಳ್ ಶಿಕ್ಷಣ ಸಂಸ್ಥೆಯಲ್ಲಿ ನಡೆಸಲಾಯಿತು. ಈ ವೇಳೆ ಟ್ರ್ಯಾಕ್‌ಸೂಟ್ ಮತ್ತು ವೆಸ್ಟ್ ಧರಿಸಿದ ರಾಜ್ಯಪಾಲ ರವಿ ಯೋಗ ಪ್ರದರ್ಶನದ ವೇಳೆ 51 ಪುಶ್-ಅಪ್‌ಗಳನ್ನು ಮಾಡುವ ಮೂಲಕ ಜನರನ್ನು ಅಚ್ಚರಿಗೊಳಿಸಿದರು. 73ನೇ ವಯಸ್ಸಿನಲ್ಲೂ ಅವರು ಫಿಟ್ ಆಗಿರುವ ರೀತಿಯನ್ನು ಕಂಡು ಯುವಕರೇ ದಂಗಾದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!

