Lalbagh Flower Show 2023: 214ನೇ ಫಲಪುಷ್ಪ ಪ್ರದರ್ಶನಕ್ಕೆ ಲಾಲ್ಬಾಗ್ ಸಜ್ಜು- ಈ ಬಾರಿ ಪರಿಸರ ಸ್ನೇಹಿ ಫ್ಲವರ್ಶೋ, ಗಮನ ಸೆಳೆಯಲಿವೆ ಲಕ್ಷ ಲಕ್ಷ ಹೂವು
Lalbagh Flower Show: ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಆಗಸ್ಟ್ 4ರಿಂದ 15ರವರೆಗೆ ಬೆಂಗಳೂರಿನ ಲಾಲ್ಬಾಗ್ನಲ್ಲಿ 214ನೇ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. ದೇಶದ 76ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಈ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರು, ಜುಲೈ 26: ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಆಗಸ್ಟ್ 4ರಿಂದ 15ರವರೆಗೆ ಬೆಂಗಳೂರಿನ ಲಾಲ್ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನ (Lalbagh Flower Show) ಏರ್ಪಡಿಸಲಾಗಿದೆ. ದೇಶದ 76ನೇ ಸ್ವಾತಂತ್ರ್ಯ ಮಹೋತ್ಸವದ (Independence Day) ಅಂಗವಾಗಿ ಈ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಇದು ಲಾಲ್ಬಾಗ್ನಲ್ಲಿ ನಡೆಯಲಿರುವ 214ನೇ ಫಲಪುಷ್ಪ ಪ್ರದರ್ಶನವಾಗಿರಲಿದೆ.
ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ಭರದಿಂದ ಸಿದ್ಧತೆ ನಡೆಸುತ್ತಿದೆ. ಈ ಬಾರಿ ವಿಧಾನಸೌಧ ಹಾಗೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪರಿಕಲ್ಪನೆಯೊಂದಿಗೆ ಫಲಪುಷ್ಪ ಪ್ರದರ್ಶನ ಸಾಕಾರಗೊಳ್ಳಲಿದೆ. ಈ ಬಾರಿ ಫಲಪುಷ್ಪ ಪ್ರದರ್ಶನಕ್ಕೆ 2 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ.
ಗಣರಾಜ್ಯೋತ್ಸವ ಅಂಗವಾಗಿ ಈ ಹಿಂದೆ ಜನವರಿಯಲ್ಲಿ ಫಲಪುಷ್ಪ ಪ್ರದರ್ಶನ ನಡೆದಿತ್ತು. ಜನವರಿ 20ರಿಂದ 30ರವರೆಗೆ 213ನೇ ಫಲಪುಷ್ಪ ಪ್ರದರ್ಶನ ನಡೆದಿತ್ತು. 11 ದೇಶಗಳಿಂದ ತರಿಸಿದ್ದ 69 ವಿವಿಧ ಹೂವುಗಳನ್ನು ಪ್ರದರ್ಶನದಲ್ಲಿ ಇರಿಸಲಾಗಿತ್ತು. ಜತೆಗೆ ಹಲವಾರು ಬಗೆಯ ಸ್ಪರ್ಧೆಗಳನ್ನೂ ಏರ್ಪಡಿಸಲಾಗಿತ್ತು.
Published on: Jul 26, 2023 07:14 PM
ಕುಶಿನಗರದಲ್ಲಿ ಪ್ರವಾಹದ ಸ್ಥಳಗಳಿಗೆ ಸಿಎಂ ಯೋಗಿ ಆದಿತ್ಯನಾಥ್ ಭೇಟಿ
ಪಂಚಮಸಾಲಿ ಗುರುಪೀಠದಲ್ಲಿ '10 ಕೋಟಿ ರೂ.' ಅನುದಾನ ದುರುಪಯೋಗ ಆರೋಪ
ಏನಾದ್ರೂ ಹೇಳಿದ್ರೆ ಅಳುತ್ತ ಕೂರ್ತೀಯ: ಶಾಸ್ತ್ರಿ ಮುಖವಾಡ ಬಯಲು ಮಾಡಿದ ಜಗ್ಗ
ಪಾಕ್ ಗಡಿ ಬಳಿ ಹೈವೇ ಮೇಲೆಯೇ ಲ್ಯಾಂಡ್ ಆದ ಭಾರತೀಯ ಸೇನಾ ಹೆಲಿಕಾಪ್ಟರ್!
