777 Charlie: ರಾಜ್ ಬಿ. ಶೆಟ್ಟಿ ಸಾಕಿದ್ದಾರೆ 8 ಬೀದಿನಾಯಿ; ಅಭಿಮಾನಿಗಳಿಗೆ ಮಾದರಿಯಾದ ನಟ
777 Charlie | Raj B Shetty: ‘777 ಚಾರ್ಲಿ’ ಚಿತ್ರದಲ್ಲಿ ರಾಜ್ ಬಿ. ಶೆಟ್ಟಿ ಅವರು ಪಶುವೈದ್ಯನ ಪಾತ್ರ ಮಾಡಿದ್ದಾರೆ. ರಿಯಲ್ ಲೈಫ್ನಲ್ಲಿ ಕೂಡ ಅವರು ಪ್ರಾಣಿಪ್ರಿಯರು.
ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಿರುವ ‘777 ಚಾರ್ಲಿ’ (777 Charlie) ಸಿನಿಮಾಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಬೀದಿನಾಯಿ (Stray Dogs) ಬಗ್ಗೆ ಕಾಳಜಿ ತೋರಿಸಿ ಎಂಬ ಸಂದೇಶ ಈ ಸಿನಿಮಾದಲ್ಲಿ ಇದೆ. ಈ ಚಿತ್ರದ ಒಂದು ಪುಟ್ಟ ಪಾತ್ರದಲ್ಲಿ ನಟಿಸಿರುವ ರಾಜ್ ಬಿ. ಶೆಟ್ಟಿ (Raj B Shetty) ಅವರು ರಿಯಲ್ ಲೈಫ್ನಲ್ಲಿಯೂ ನಾಯಿಪ್ರೇಮಿ. ಅವರು ಮನೆಯಲ್ಲಿ 8 ಬೀದಿನಾಯಿಗಳನ್ನು ಸಾಕಿದ್ದಾರೆ. ರಕ್ಷಿತ್ ಶೆಟ್ಟಿ ಮತ್ತು ಇಡೀ ಟೀಮ್ ಜೊತೆ ‘777 ಚಾರ್ಲಿ’ ಸಿನಿಮಾವನ್ನು ವೀಕ್ಷಿಸಿದ ಬಳಿಕ ರಾಜ್ ಬಿ. ಶೆಟ್ಟಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಆಗ ಈ ವಿಚಾರ ತಿಳಿಸಿದರು. ಈ ಸಿನಿಮಾ ನೋಡಿದ ಬಳಿಕ ಅನೇಕ ಪ್ರೇಕ್ಷಕರು ತಾವು ಕೂಡ ನಾಯಿಗಳನ್ನು ಸಾಕುವುದಾಗಿ ಹೇಳಿದ್ದಾರೆ. ಒಟ್ಟಿನಲ್ಲಿ ಜನರ ಮನ ಪರಿವರ್ತನೆ ಮಾಡುವಲ್ಲಿ ಈ ಸಿನಿಮಾ ಯಶಸ್ವಿ ಆಗಿದೆ. ಎಲ್ಲೆಡೆಯಿಂದ ಉತ್ತಮ ವಿಮರ್ಶೆಗಳು ಕೇಳಿಬರುತ್ತಿವೆ. ಕಿರಣ್ ರಾಜ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Jun 11, 2022 03:50 PM
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು

