Live: ಸ್ವಾತಂತ್ರ್ಯ ದಿನಾಚರಣೆ; ಸಿಎಂ ಧ್ವಜಾರೋಹಣ ನೇರ ಪ್ರಸಾರ

Updated on: Aug 15, 2025 | 9:15 AM

Independence Day celebrations: ಬೆಂಗಳೂರಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಗೆ ಮಾಣಿಕ್​ ಷಾ ಪರೇಡ್ ಮೈದಾನದಲ್ಲಿ ಅದ್ಧೂರಿ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು. 30 ತುಕಡಿಗಳ ಪಥಸಂಚಲನ, ಇ-ಪಾಸ್ ವ್ಯವಸ್ಥೆ ಮತ್ತು ಬಿಗಿ ಭದ್ರತೆ ಒದಗಿಸಲಾಗಿದೆ. ನೇರ ಪ್ರಸಾರ ವೀಕ್ಷಿಸಿ.

ಬೆಂಗಳೂರು, ಆಗಸ್ಟ್ 15: ಇಂದು ಎಲ್ಲೆಡೆ 79ನೇ ಸ್ವಾತಂತ್ರ್ಯ ದಿನಾಚರಣೆ (Independence Day) ಸಂಭ್ರಮ ಕಳೆಕಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಿದರು. ಇತ್ತ ನಗರದ ಮಾಣಿಕ್​ ಷಾ ಪರೇಡ್ ಮೈದಾನದಲ್ಲಿ ಅದ್ಧೂರಿ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು. ಇದೇ ಮೊದಲ ಬಾರಿಗೆ ಸಾರ್ವಜನಿಕರಿಗೆ ಇ-ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ. ನೇರ ಪ್ರಸಾರ ಇಲ್ಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Aug 15, 2025 09:14 AM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More