ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು, 20 ಮಂದಿಗೆ ಗಾಯ
ಇಂದು ಪ್ರಾರ್ಥನೆಯ ವೇಳೆ ಸಿರಿಯಾದ ಹೋಮ್ಸ್ ಪಟ್ಟಣದ ಮಸೀದಿಯಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ 8 ಜನರು ಸಾವನ್ನಪ್ಪಿದ್ದಾರೆ, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಧ್ಯ ಸಿರಿಯಾದ ಹೋಮ್ಸ್ ನಗರದಲ್ಲಿರುವ ಇಮಾಮ್ ಅಲಿ ಬಿನ್ ಅಬಿ ತಾಲಿಬ್ ಮಸೀದಿಯಲ್ಲಿ ಸ್ಫೋಟ ಸಂಭವಿಸಿ 8 ಜನರು ಸಾವನ್ನಪ್ಪಿದ್ದಾರೆ. ಸರ್ಕಾರಿ ನಿಯಂತ್ರಿತ ಜಿಲ್ಲೆಯಾದ ವಾಡಿ ಅಲ್-ದಹಾಬ್ ನೆರೆಹೊರೆಯಲ್ಲಿರುವ ಮಸೀದಿಯೊಳಗೆ ಸ್ಫೋಟ ಸಂಭವಿಸಿದೆ.
ನವದೆಹಲಿ, ಡಿಸೆಂಬರ್ 26: ಸಿರಿಯಾದ ಹೋಮ್ಸ್ ಮಸೀದಿಯಲ್ಲಿ ಇಂದು ಪ್ರಾರ್ಥನೆಯ ಸಮಯದಲ್ಲಿ ಸಂಭವಿಸಿದ ಸ್ಫೋಟದಲ್ಲಿ (Syria Blast) 8 ಜನರು ಸಾವನ್ನಪ್ಪಿದ್ದಾರೆ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಧ್ಯ ಸಿರಿಯಾದ ಹೋಮ್ಸ್ ನಗರದಲ್ಲಿರುವ ಇಮಾಮ್ ಅಲಿ ಬಿನ್ ಅಬಿ ತಾಲಿಬ್ ಮಸೀದಿಯಲ್ಲಿ ಸ್ಫೋಟ ಸಂಭವಿಸಿ 8 ಜನರು ಸಾವನ್ನಪ್ಪಿದ್ದಾರೆ. ಸರ್ಕಾರಿ ನಿಯಂತ್ರಿತ ಜಿಲ್ಲೆಯಾದ ವಾಡಿ ಅಲ್-ದಹಾಬ್ ನೆರೆಹೊರೆಯಲ್ಲಿರುವ ಮಸೀದಿಯೊಳಗೆ ಸ್ಫೋಟ ಸಂಭವಿಸಿದೆ ಎಂದು ಸಿರಿಯನ್ ಅರಬ್ ಸುದ್ದಿ ಸಂಸ್ಥೆ (SANA) ವರದಿ ಮಾಡಿದೆ.
ಗಾಯಾಳುಗಳನ್ನು ಸ್ಥಳಾಂತರಿಸಲು ಮತ್ತು ಪ್ರದೇಶವನ್ನು ಸುರಕ್ಷಿತಗೊಳಿಸಲು ತುರ್ತು ಪ್ರತಿಕ್ರಿಯೆ ತಂಡಗಳನ್ನು ತಕ್ಷಣವೇ ಸ್ಥಳಕ್ಕೆ ಕಳುಹಿಸಲಾಗಿದೆ. ತನಿಖಾಧಿಕಾರಿಗಳು ಘಟನಾ ಸ್ಥಳವನ್ನು ಪರಿಶೀಲಿಸಲು ಭದ್ರತಾ ಪಡೆಗಳು ಮಸೀದಿಯನ್ನು ಸುತ್ತುವರೆದಿವೆ. ಈ ಸ್ಫೋಟದ ಸ್ವರೂಪ ಮತ್ತು ಕಾರಣವನ್ನು ಇನ್ನೂ ನಿರ್ಧರಿಸಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆತ್ಮಾಹುತಿ ದಾಳಿಯ ಶಂಕೆಯೂ ವ್ಯಕ್ತವಾಗಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

