ಹಿಮಾಚಲ ಪ್ರದೇಶದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲ ಪ್ರದೇಶದ ಕಟ್ಟಡವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 8 ವರ್ಷದ ಮಗು ಸಾವನ್ನಪ್ಪಿದೆ. ಇನ್ನೂ ಹಲವರು ಬೆಂಕಿಯಲ್ಲಿ ಸಿಲುಕಿಕೊಂಡಿದ್ದಾರೆ, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಭಾನುವಾರ ತಡರಾತ್ರಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ 8 ವರ್ಷದ ಮಗು ಸಾವನ್ನಪ್ಪಿದ್ದು, ನೇಪಾಳಿ ಮೂಲದ ವಲಸೆ ಕಾರ್ಮಿಕರು ಸೇರಿದಂತೆ ಹಲವರು ಸಿಲುಕಿಕೊಂಡಿದ್ದಾರೆ. ಹಲವಾರು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ತಕ್ಷಣ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಯಿತು.
ಸೋಲನ್, ಡಿಸೆಂಬರ್ 12: ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಅಪಾರ್ಟ್ಮೆಂಟ್ ಕಟ್ಟಡವೊಂದರಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ (Fire Accident) 8 ವರ್ಷದ ಮಗು ಸಾವನ್ನಪ್ಪಿದ್ದು, ನೇಪಾಳಿ ಮೂಲದ ವಲಸೆ ಕಾರ್ಮಿಕರು ಸೇರಿದಂತೆ ಹಲವರು ಸಿಲುಕಿಕೊಂಡಿದ್ದಾರೆ. ಹಲವಾರು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ತಕ್ಷಣ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಯಿತು. ಆದರೂ ನಿರಂತರವಾಗಿ ಸಿಲಿಂಡರ್ ಸ್ಫೋಟಗಳು ಉಂಟಾಗಿದ್ದರಿಂದ ಬೆಂಕಿ ನಂದಿಸುವುದು ಕಷ್ಟವಾಯಿತು. ಇಂದು ಬೆಳಿಗ್ಗೆ 8 ಗಂಟೆಯವರೆಗೂ ಬೆಂಕಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿರಲಿಲ್ಲ.
ಬೆಂಕಿಯನ್ನು ನಿಯಂತ್ರಿಸಲು, ಹತ್ತಿರದ ಅಂಗಡಿಗಳು ಮತ್ತು ಮನೆಗಳಿಗೆ ಹರಡದಂತೆ ತಡೆಯಲು 6 ಅಗ್ನಿಶಾಮಕ ದಳದ ವಾಹನಗಳು ಮತ್ತು ನೀರಿನ ಟ್ಯಾಂಕರ್‌ಗಳನ್ನು ಕರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳನ್ನು ಸಹ ಕರೆಸಿಕೊಳ್ಳಲಾಯಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬಿಗ್ಬಾಸ್ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್ನಲ್ಲಿರೋ ಟಾಕ್ಸಿಕ್’ ಟೀಸರ್ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'

