5 ಬಂಧಿತ ಗಲಭೆಕೋರರಿಗೆ ಕೊರೊನಾ ಪಾಸಿಟಿವ್, DJ ಹಳ್ಳಿ ಠಾಣೆ ಸ್ಯಾನಿಟೈಸ್
[lazy-load-videos-and-sticky-control id=”MpXe5GDdric”] ಬೆಂಗಳೂರು: ಕೆ.ಜಿ ಹಳ್ಳಿ ಹಾಗೂ ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಂತಹ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಈಗಾಗಲೇ ನೂರಾರು ಗಲಭೆಕೋರನ್ನು ಬಂಧಿಸಿದ್ದು, ಬಂಧಿತ ಆರೋಪಿಗಳ ತನಿಖೆ ನಡೆಸಿ, ಎಲ್ಲರನ್ನು ಜೈಲಿಗಟ್ಟುವ ಕೆಲಸ ಮಾಡುತ್ತಿದ್ದಾರೆ. ಗಲಭೆಕೋರರ ಪೈಕಿ 80 ಜನರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ಇವರ ಪೈಕಿ ಐವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತ ಗಲಭೆಕೋರರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ 226 ಆರೋಪಿಗಳನ್ನು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಶಿಫ್ಟ್ […]
[lazy-load-videos-and-sticky-control id=”MpXe5GDdric”]
ಬೆಂಗಳೂರು: ಕೆ.ಜಿ ಹಳ್ಳಿ ಹಾಗೂ ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಂತಹ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಈಗಾಗಲೇ ನೂರಾರು ಗಲಭೆಕೋರನ್ನು ಬಂಧಿಸಿದ್ದು, ಬಂಧಿತ ಆರೋಪಿಗಳ ತನಿಖೆ ನಡೆಸಿ, ಎಲ್ಲರನ್ನು ಜೈಲಿಗಟ್ಟುವ ಕೆಲಸ ಮಾಡುತ್ತಿದ್ದಾರೆ.
ಗಲಭೆಕೋರರ ಪೈಕಿ 80 ಜನರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ಇವರ ಪೈಕಿ ಐವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತ ಗಲಭೆಕೋರರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ 226 ಆರೋಪಿಗಳನ್ನು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಇನ್ನು 27 ಗಲಭೆಕೋರರು ಪೊಲೀಸ್ ಕಸ್ಟಡಿಯಲ್ಲಿದ್ದು, ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿರುವ ಗಲಭೆಕೋರರನ್ನು, ಜೈಲಿನ ನೂತನ ಕಟ್ಟಡದಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಜೊತೆಗೆ, ಇವರಿಗೆ ಹೊರಗಿನಿಂದ ಬಂದವರ ಜೊತೆ ಭೇಟಿಗೆ ಅವಕಾಶ ನಿರಾಕರಿಸಲಾಗಿದೆ. ಗಲಭೆಕೋರರಲ್ಲಿ 14 ದಿನಗಳ ನಂತರ ಕೊರೊನಾ ಲಕ್ಷಣಗಳು ಕಾಣದಿದ್ದರೆ, ಅವರನ್ನು ಹಳೆಯ ಜೈಲಿಗೆ ಸ್ಥಳಾಂತರಿಸಲು ನಿರ್ಧಾರ ಮಾಡಲಾಗಿದೆ. ಜೊತೆಗೆ, ಗಲಭೆಯ ಮುಂಚೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿ ನವೀನ್ನ್ನು ಜೈಲಿನ ಪ್ರತ್ಯೇಕ ಕೊಠಡಿಯಲ್ಲಿರಿಸಿ, ಫುಲ್ ಸೆಕ್ಯೂರಿಟಿ ನೀಡಲಾಗಿದೆ.
ಗಲಭೆಕೋರರಲ್ಲಿ ಐದು ಮಂದಿಗೆ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಡಿ.ಜೆ.ಹಳ್ಳಿ ಪೊಲೀಸ್ ಠಾಣೆಗೆ ಸ್ಯಾನಿಟೈಸ್ ಮಾಡಲಾಯಿತು. ಬಿಬಿಎಂಪಿ ಸಿಬ್ಬಂದಿಯಿಂದ ಪೊಲೀಸ್ ಠಾಣೆಯನ್ನ ಸ್ಯಾನಿಟೈಸ್ ಮಾಡಲಾಯಿತು.
Published On - 11:34 am, Sat, 22 August 20