‘ಮತಗಳನ್ನು ಕದಿಯಲು ಮೋದಿ ಹೊಸ ಮಾರ್ಗ ಹುಡುಕಿದ್ದಾರೆ’; ಕ್ಷೇತ್ರ ಮರುವಿಂಗಡಣೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ
ದೇಶದ ಚುನಾವಣಾ ನಕ್ಷೆಯನ್ನು ತನ್ನ ಅನುಕೂಲಕ್ಕೆ ತಕ್ಕಂತೆ ಬದಲಾಯಿಸಲು ಬಿಜೆಪಿಯು ಈ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯನ್ನು ಬಳಸಿಕೊಳ್ಳುತ್ತಿದೆ. ಪ್ರಧಾನಿ ಮೋದಿ ವೋಟ್ ಚೋರಿಗೆ ಹೊಸ ಮಾರ್ಗ ಹುಡುಕಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ದೇಶದ ಯುವಜನತೆ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಲು ಬಯಸುತ್ತಿದ್ದು, ಬಿಜೆಪಿಯ ಈ ಯೋಜನೆಯನ್ನು ತಾವು ವಿಫಲಗೊಳಿಸುವುದಾಗಿ ಅವರು ಹೇಳಿದ್ದಾರೆ.
ನವದೆಹಲಿ, ನವೆಂಬರ್ 28: ಕೇಂದ್ರ ಸರ್ಕಾರ ಮಂಡಿಸಲು ಉದ್ದೇಶಿಸಿರುವ ಕ್ಷೇತ್ರ ಪುನರ್ವಿಂಗಡಣೆ ವಿಧೇಯಕವು ಬಿಜೆಪಿಯ ಎಸ್ಕೇಪ್ ಪ್ಲಾನ್ ಆಗಿದ್ದು, ಇದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಭಾರತದ ಆತ್ಮದ ಮೇಲೆಯೇ ದಾಳಿ ನಡೆಸುತ್ತಿದ್ದಾರೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಇಂಡಿಯ ಮೈತ್ರಿಕೂಟದ ಸಭೆಯ ಬಳಿಕ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ಬಿಜೆಪಿಯ ಈ ಯೋಜನೆಯನ್ನು ಯಾವುದೇ ಕಾರಣಕ್ಕೂ ಯಶಸ್ವಿಯಾಗಲು ಬಿಡುವುದಿಲ್ಲ. ಲೋಕಸಭೆಯ ಸ್ಥಾನಗಳ ಸಂಖ್ಯೆಯನ್ನು 850ಕ್ಕೆ ಹೆಚ್ಚಿಸುವ ಪ್ರಸ್ತಾವಿತ ಪ್ರಕ್ರಿಯೆಯು ಒಂದೇ ಒಂದು ಮತ ಚಲಾವಣೆಯಾಗುವ ಮೊದಲೇ ಬಿಜೆಪಿಗೆ ದೊಡ್ಡ ಮಟ್ಟದ ಲಾಭ ನೀಡಲಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಯಾವುದೇ ತಾರ್ಕಿಕ ಆಧಾರವಿಲ್ಲದೆ ಕ್ಷೇತ್ರಗಳ ಗಡಿಗಳನ್ನು ಪುನರ್‌ರಚಿಸುವ ಮೂಲಕ, ವಿರೋಧ ಪಕ್ಷಗಳ ಮತದಾರರನ್ನು ಒಂದೇ ಕ್ಷೇತ್ರದಲ್ಲಿ ಕೇಂದ್ರೀಕರಿಸುವ ಹುನ್ನಾರವನ್ನು ಬಿಜೆಪಿ ನಡೆಸುತ್ತಿದೆ ಎಂದು ಅವರು ದೂರಿದ್ದಾರೆ.
ದೇಶದ ಚುನಾವಣಾ ನಕ್ಷೆಯನ್ನು ತನ್ನ ಅನುಕೂಲಕ್ಕೆ ತಕ್ಕಂತೆ ಬದಲಾಯಿಸಲು ಬಿಜೆಪಿಯು ಈ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯನ್ನು ಬಳಸಿಕೊಳ್ಳುತ್ತಿದೆ. ಪ್ರಧಾನಿ ಮೋದಿ ವೋಟ್ ಚೋರಿಗೆ ಹೊಸ ಮಾರ್ಗ ಹುಡುಕಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ದೇಶದ ಯುವಜನತೆ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಲು ಬಯಸುತ್ತಿದ್ದು, ಬಿಜೆಪಿಯ ಈ ಯೋಜನೆಯನ್ನು ತಾವು ವಿಫಲಗೊಳಿಸುವುದಾಗಿ ಅವರು ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
