87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಲೋಗೋ ಅನಾವರಣಗೊಳಿಸಿದ ಸಿಎಂ
ಇದೇ ಡಿಸೆಂಬರ್ 20, 21 ಮತ್ತು 22 ರಂದು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಹಿನ್ನೆಲೆ ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಕನ್ನಡ ಸಾಹಿತ್ಯ ಸಮ್ಮೇಳನದ ಲೋಗೋ ಅನಾವರಣಗೊಳಿಸಿದ್ದಾರೆ. ಕಾರ್ಯಕ್ರಮ ಚೆನ್ನಾಗಿ ಆಗಲಿ ಎಂದು ಶುಭ ಕೋರಿದ್ದಾರೆ.
ಬೆಂಗಳೂರು, ಜುಲೈ 19: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲೋಗೋವನ್ನು ಸಿಎಂ ಸಿದ್ದರಾಮಯ್ಯ (Siddaramaiah) ಇಂದು ಅನಾವರಣಗೊಳಿಸಿದ್ದಾರೆ. ವಿಧಾನಸೌಧದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಲೋಗೋ ಅನಾವರಣ ಮಾಡಿದ್ದು, ಇದೇ ಡಿಸೆಂಬರ್ 20, 21 ಮತ್ತು 22 ರಂದು ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಚಿವರಾದ ಶಿವರಾಜ್ ಎಸ್ ತಂಗಡಗಿ, ಈಶ್ವರ್ ಖಂಡ್ರೆ, ಚಲುವರಾಯಸ್ವಾಮಿ, ಕಸಪಾ ಅಧ್ಯಕ್ಷ ಮಹೇಶ್ ಜೋಶಿ ಕಾರ್ಯಕ್ರಮ ಚೆನ್ನಾಗಿ ಆಗಲಿ ಎಂದು ಕಸಪಾ ಅಧ್ಯಕ್ಷ ಜೋಶಿಗೆ ಸಿಎಂ ಶುಭಾಶಯ ಕೋರಿದ್ದಾರೆ. ಮಂಡ್ಯ ನಮ್ಮ ಜಿಲ್ಲೆ ಕಾರ್ಯಕ್ರಮ ಚೆನ್ನಾಗಿಯಾಗಲಿ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos