ತುಮಕೂರು ಬಳಿ ಟ್ರಕ್ ಗೆ ಗುದ್ದಿದ ಕ್ರೂಸರ್, 9 ಕಾರ್ಮಿಕರು ಸ್ಥಳದಲ್ಲೇ ಸಾವು, 15 ಜನರಿಗೆ ಗಾಯ
. ಗಾಯಗೊಂಡವರನ್ನು ಕೂಡಲೇ ತುಮಕೂರಿನ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ತುಮಕೂರು ಜಿಲ್ಲಾಧಿಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತಾಡುತ್ತಾ ಗಾಯಗೊಂಡವರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದ ಕಾರಣ ಅವರನ್ನು ಬೆಂಗಳೂರಿನ ನಿಮ್ಹಾನ್ಸ್ ಗೆ ಕಳಿಸಲಾಗಿದೆ ಎಂದರು.
ಕ್ರೂಸರ್ ಮತ್ತು ಟ್ರಕ್ ನಡುವೆ ತುಮಕೂರಿನ ಕಳ್ಳಂಬೆಳ್ಳದ ಬಳಿ ಗುರುವಾರ ಬೆಳ್ಳಂಬೆಳಗ್ಗೆ ನಡುವೆ ನಡೆದ ಭೀಕರ ಅಫಘಾತದಲ್ಲಿ ಕ್ರೂಸರ್ ನಲ್ಲಿ ಪ್ರಯಾಣಿಸುತ್ತಿದ್ದ 9 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು 15 ಜನ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಕೂಡಲೇ ತುಮಕೂರಿನ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ತುಮಕೂರು ಜಿಲ್ಲಾಧಿಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತಾಡುತ್ತಾ ಗಾಯಗೊಂಡವರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದ ಕಾರಣ ಅವರನ್ನು ಬೆಂಗಳೂರಿನ ನಿಮ್ಹಾನ್ಸ್ ಗೆ ಕಳಿಸಲಾಗಿದೆ, ಉಳಿದ 13 ಜನರಲ್ಲಿ 9 ಜನರಿಗೆ ತೀವ್ರಸ್ವರೂಪದ ಗಾಯಗಳಾಗಿದ್ದು ಅವರಿಗೆ ಜಿಲ್ಲಾಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ ಮತ್ತು ಮಿಕ್ಕಿದ 4 ಜನರು ಸಣ್ಣಪುಟ್ಟ ಗಾಯಗಳನ್ನು ಅನುಭವಿಸಿದ್ದಾರೆ ಎಂದರು. ಕ್ರೂಸರ್ ನಲ್ಲಿದ್ದ ಕಾರ್ಮಿಕರು ರಾಯಚೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು.