ಆಂಧ್ರದಲ್ಲಿ ಬಸ್ ಕಣಿವೆಗೆ ಉರುಳಿ 9 ಸಾವು; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

Updated on: Dec 12, 2025 | 7:44 PM

ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಬಸ್ ಕಂದಕಕ್ಕೆ ಉರುಳಿ 9 ಜನರು ಸಾವನ್ನಪ್ಪಿದ್ದಾರೆ ಮತ್ತು 22 ಮಂದಿ ಗಾಯಗೊಂಡಿದ್ದಾರೆ. 35 ಪ್ರಯಾಣಿಕರು ಮತ್ತು ಇಬ್ಬರು ಚಾಲಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಚಿತ್ತೂರು ಜಿಲ್ಲೆಯಿಂದ ತೆಲಂಗಾಣಕ್ಕೆ ತೆರಳುತ್ತಿತ್ತು. ಚಿತ್ತೂರು-ಮರೇಡುಮಿಲಿ ಘಾಟ್ ರಸ್ತೆಯಲ್ಲಿ ದುರ್ಗಾ ದೇವಸ್ಥಾನದ ಬಳಿ ಬೆಳಿಗ್ಗೆ 4.30ರ ಸುಮಾರಿಗೆ ಅಪಘಾತ ಸಂಭವಿಸಿದೆ.

ಚಿತ್ತೂರು, ಡಿಸೆಂಬರ್ 12: ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಬಸ್ (Bus Accident) ಕಂದಕಕ್ಕೆ ಉರುಳಿ 9 ಜನರು ಸಾವನ್ನಪ್ಪಿದ್ದಾರೆ ಮತ್ತು 22 ಮಂದಿ ಗಾಯಗೊಂಡಿದ್ದಾರೆ. 35 ಪ್ರಯಾಣಿಕರು ಮತ್ತು ಇಬ್ಬರು ಚಾಲಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಚಿತ್ತೂರು ಜಿಲ್ಲೆಯಿಂದ ತೆಲಂಗಾಣಕ್ಕೆ ತೆರಳುತ್ತಿತ್ತು. ಚಿತ್ತೂರು-ಮರೇಡುಮಿಲಿ ಘಾಟ್ ರಸ್ತೆಯಲ್ಲಿ ದುರ್ಗಾ ದೇವಸ್ಥಾನದ ಬಳಿ ಬೆಳಿಗ್ಗೆ 4.30ರ ಸುಮಾರಿಗೆ ಅಪಘಾತ ಸಂಭವಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾಣಹಾನಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. “ಮೃತರ ಪ್ರತಿ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು” ಎಂದು ಮೋದಿ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ