AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ಗಂಟೆಗಳ ಶೋಧ, ಸಿಗದ ದಾಖಲೆಗಳು: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?

9 ಗಂಟೆಗಳ ಶೋಧ, ಸಿಗದ ದಾಖಲೆಗಳು: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?

ವಿಕಾಸ್​ ಬಿಎಂ
| Edited By: |

Updated on: Aug 24, 2026 | 7:14 PM

Share

ಕೆಪಿಎಸ್ಸಿ ಹಗರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 9 ಗಂಟೆಗಳ ಶೋಧನೆ ನಡೆಸಿದರೂ, ಮಹತ್ವದ ದಾಖಲೆಗಳು ಸಿಕ್ಕಿಲ್ಲ. ದಾಳಿಯ ಸುಳಿವು ಅರಿತು ಜ್ಞಾನೇಂದ್ರ ಕುಮಾರ್ ಮನೆಯಲ್ಲಿದ್ದ ಎಲೆಕ್ಟ್ರಾನಿಕ್ ಡಿವೈಸ್‌ಗಳೊಂದಿಗೆ ಪೂರ್ವನಿಯೋಜಿತವಾಗಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರು, ಆಗಸ್ಟ್​ 24: ಕೆಪಿಎಸ್‌ಸಿ ಪರೀಕ್ಷಾ ಅಕ್ರಮದ ತನಿಖೆ ಚುರುಕುಗೊಳಿಸಿರುವ ಇಡಿ ಅಧಿಕಾರಿಗಳು ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್​ ನಿವಾಸದ ಮೇಲೆ ಸತತ 9 ಗಂಟೆಗಳ ಕಾಲ ಶೋಧ ನಡೆಸಿದರೂ ಯಾವುದೇ ಮಹತ್ವದ ದಾಖಲೆಗಳು ಲಭ್ಯವಾಗಿಲ್ಲ. ಇಡಿ ದಾಳಿಯ ಮುನ್ಸೂಚನೆ ಅರಿತಿದ್ದ ಜ್ಞಾನೇಂದ್ರ ಕುಮಾರ್, ಲ್ಯಾಪ್ಟಾಪ್, ಮೊಬೈಲ್ ಸೇರಿದಂತೆ ಪ್ರಮುಖ ದಾಖಲೆಗಳನ್ನು ಮೊದಲೇ ಪ್ಯಾಕ್ ಮಾಡಿಕೊಂಡು ಪಕ್ಕಾ ಪ್ಲಾನ್ ಮಾಡಿ ಪರಾರಿಯಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಮತ್ತೊಂದೆಡೆ, ತಂದೆಗೆ ಹೃದಯಾಘಾತವಾಗಿದ್ದು ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ಕಾರಣ ನೀಡಿ 15 ದಿನಗಳ ತುರ್ತು ರಜೆ ಕೋರಿ ಪತ್ರ ಬರೆದಿದ್ದರು. ಆದರೆ ಉತ್ತರ ಪ್ರದೇಶದ ಲಕ್ನೋ ಸಮೀಪದ ಗ್ರಾಮದಲ್ಲಿರುವ ಅವರ ಮನೆ ಮೇಲೆ ದಾಳಿ ನಡೆಸಿದ ಇಡಿ ಅಧಿಕಾರಿಗಳಿಗೆ ತಂದೆಯು ತಾನು ಆರೋಗ್ಯವಾಗಿದ್ದು ಪುತ್ರ ಮನೆಗೆ ಬಂದೇ ಇಲ್ಲ ಎಂದು ಹೇಳಿಕೆ ನೀಡಿರುವುದು ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿದೆ. ಸದ್ಯ ಮನೆಯಲ್ಲಿ ಯಾವುದೇ ದಾಖಲೆಗಳು ಸಿಗದ ಹಿನ್ನೆಲೆ ಇಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಜ್ಞಾನೇಂದ್ರ ಕುಮಾರ್ ನಿವಾಸಕ್ಕೆ ಸಮನ್ಸ್ ನೋಟಿಸ್ ಅಂಟಿಸಿ ವಾಪಸಾಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ವಿಕಾಸ್​ ಬಿಎಂ
ವಿಕಾಸ್​ ಬಿಎಂ

ವಿಕಾಸ್​ ಬಿಎಂ ಅವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ. ಮೈಸೂರು ಯೂನಿವರ್ಸಿಟಿ ಯಲ್ಲಿ ಶಿಕ್ಷಣ ಮುಗಿಸಿ, 2014 ರಿಂದ ಎಲೆಕ್ಟ್ರಾನಿಕ್ ಮಾದ್ಯಮದಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ಸದ್ಯ ಬೆಂಗಳೂರು ಕ್ರೈಂ ವರದಿಗಾರನಾಗಿ 11 ವರ್ಷ ಸೇವೆ ಸಲ್ಲಿಸಿದ್ದಾರೆ. ಕ್ರೈಂ ರಿಪೋರ್ಟಿಂಗ್ ಹಾಗು ಇನ್ವೆಷ್ಟಿಗೇಟಿವ್ ವರದಿಗಾರರಾಗಿ ಹಾಗು ಸ್ಟಿಂಗ್ ಆಪರೇಷನ್​ಗಳನ್ನ ಮಾಡಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಸುದ್ದಿ ಮೊದಲು ಬ್ರೇಕ್ ಮಾಡಿದ್ದಲ್ಲದೆ, ಶಂಕಿತರ ಸಿಸಿ ಕ್ಯಾಮರಾ ವಿಡಿಯೋಗಳನ್ನ ಪ್ರಸರಣ ಮಾಡಿ ಸಂಸ್ಥೆಯಿಂದ ಪ್ರಶಂಸೆಗೆ ಪಾತ್ರನಾಗಿದ್ದಾರೆ. ಅಲ್ಲದೇ ಬೆಂಗಳೂರಲ್ಲಿ ಟೈಡಾಲ್ ಡ್ರಗ್ ಸೇವನೆಯ ಸ್ಟಿಂಗ್ ಆಪರೇಷನ್ ಮಾಡಿ, ಮೆಡಿಕಲ್ ಗಳಲ್ಲಿ ಟೈಡಾಲ್ ಮಾತ್ರೆಯ ಮಾರಟ ನಿಯಂತ್ರಣಕ್ಕೆ ಬರುವಂತೆ ಮಾಡಿದ್ದಾರೆ. ನೊಂದವರ ಪರವಾಗಿ ನಿಂತು ವಸ್ತುನಿಷ್ಠವಾಗಿ ಸುದ್ದಿಗಳನ್ನ ನೀಡಿ ನ್ಯಾಯ ಕೊಡಿಸುವುದು ಇವರ ಮೊದಲ ಉದ್ದೇಶ. ಸದ್ಯ ಟಿವಿ9 ಸಂಸ್ಥೆಯಲ್ಲಿ ಬೆಂಗಳೂರು ಕ್ರೈಂ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ರೋಡ್ ಟ್ರಿಪ್, ಕ್ರಿಕೆಟ್‌, ವಾಲಿಬಾಲ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್ ಪುಸ್ತಕ ಓದುವುದು ಮತ್ತು ಕ್ರೈಂ ತ್ರಿಲ್ಲರ್ ಸಿನಿಮಾಗಳನ್ನ ನೋಡುವುದು ಇವರ ಹವ್ಯಾಸಗಳು.

Read More