ಹಿಮಾಚಲ ಪ್ರದೇಶದ ಸಿರ್ಮೌರ್‌ನಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಅಪಘಾತದಲ್ಲಿ ಸಾವನ್ನಪ್ಪಿದವರ ಬಗ್ಗೆ ದುಃಖ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅಪಘಾತದಲ್ಲಿ ಸಾವನ್ನಪ್ಪಿದವರ ಹತ್ತಿರದ ಸಂಬಂಧಿಕರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ಮತ್ತು ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಆರೈಕೆಯನ್ನು ಖಚಿತಪಡಿಸಿಕೊಳ್ಳುವಂತೆ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ರಸ್ತೆಯ ಮೇಲಿನ ಹಿಮದಿಂದಾಗಿ ಚಾಲಕ ನಿಯಂತ್ರಣ ಕಳೆದುಕೊಂಡಿರಬಹುದು ಎನ್ನಲಾಗಿದೆ.
ಶಿಮ್ಲಾ, ಜನವರಿ 9: ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ಖಾಸಗಿ ಬಸ್ ಸುಮಾರು 500 ಅಡಿ ಆಳದ ಕಂದಕಕ್ಕೆ ಉರುಳಿದೆ. ಇದರ ಪರಿಣಾಮವಾಗಿ 9 ಜನರು ಸಾವನ್ನಪ್ಪಿದ್ದು, ಸುಮಾರು 40 ಮಂದಿ ಗಾಯಗೊಂಡಿದ್ದಾರೆ. ಶಿಮ್ಲಾದಿಂದ ರಾಜ್‌ಗಢ ಮೂಲಕ ಕುಪ್ವಿಗೆ ತೆರಳುತ್ತಿದ್ದ ಬಸ್ ಹರಿಪುರ್ಧರ್ ಗ್ರಾಮದ ಬಳಿ ರಸ್ತೆಯಿಂದ ಜಾರಿ ಕಣಿವೆಗೆ ಉರುಳಿ ಬಿದ್ದಾಗ ಈ ಅಪಘಾತ (Accident) ಸಂಭವಿಸಿದೆ.
ಅಪಘಾತದಲ್ಲಿ ಸಾವನ್ನಪ್ಪಿದವರ ಬಗ್ಗೆ ದುಃಖ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅಪಘಾತದಲ್ಲಿ ಸಾವನ್ನಪ್ಪಿದವರ ಹತ್ತಿರದ ಸಂಬಂಧಿಕರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ಮತ್ತು ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಆರೈಕೆಯನ್ನು ಖಚಿತಪಡಿಸಿಕೊಳ್ಳುವಂತೆ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ರಸ್ತೆಯ ಮೇಲಿನ ಹಿಮದಿಂದಾಗಿ ಚಾಲಕ ನಿಯಂತ್ರಣ ಕಳೆದುಕೊಂಡಿರಬಹುದು ಎನ್ನಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ