ಮತ್ತಿಬ್ಬರು ಆಶಾ ಕಾರ್ಯಕರ್ತೆಯರು ಆಸ್ಪತ್ರೆಗೆ ದಾಖಲು: ಈವರೆಗೆ 20 ಮಹಿಳೆಯರು ಅಸ್ವಸ್ಥ

Edited By:

Updated on: Nov 25, 2026 | 5:59 PM

ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ 9ನೇ ದಿನಕ್ಕೆ ಕಾಲಿಟ್ಟಿದೆ. ಅನ್ನಾಹಾರದ ಕೊರತೆ, ಶೌಚಾಲಯ ಸಮಸ್ಯೆ, ಚಳಿಯ ತೀವ್ರತೆಯಿಂದಾಗಿ ಮತ್ತಿಬ್ಬರು ಅಸ್ವಸ್ಥರಾಗಿದ್ದಾರೆ. ವಿಜಯನಗರ ಜಿಲ್ಲೆಯ,ಹಗರಿಬೊಮ್ಮನಹಳ್ಳಿಯ ಜುಬೇದಾ ಬೇಗಂ ( 36 ) ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇನ್ನು ದೊಡ್ಡಬಳ್ಳಾಪುರದ ಲಕ್ಷ್ಮಮ್ಮ (50) ಎದೆ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಕೂಡಲೇ ಇಬ್ಬರನ್ನು ಆ್ಯಂಬುಲೆನ್ಸ್ ಮೂಲಕ ಕೆಸಿ ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದರೊಂದಿಗೆ 9 ದಿನದ ಪ್ರತಿಭಟನೆಯಲ್ಲಿ ಈವರೆಗೂ 20 ಮಂದಿ ಅಸ್ವಸ್ಥರಾಗಿದ್ದಾರೆ.

ಬೆಂಗಳೂರು, ನವೆಂಬರ್ 25: ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ 9ನೇ ದಿನಕ್ಕೆ ಕಾಲಿಟ್ಟಿದೆ. ಅನ್ನಾಹಾರದ ಕೊರತೆ, ಶೌಚಾಲಯ ಸಮಸ್ಯೆ, ಚಳಿಯ ತೀವ್ರತೆಯಿಂದಾಗಿ ಮತ್ತಿಬ್ಬರು ಅಸ್ವಸ್ಥರಾಗಿದ್ದಾರೆ. ವಿಜಯನಗರ ಜಿಲ್ಲೆಯ,ಹಗರಿಬೊಮ್ಮನಹಳ್ಳಿಯ ಜುಬೇದಾ ಬೇಗಂ ( 36 ) ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇನ್ನು ದೊಡ್ಡಬಳ್ಳಾಪುರದ ಲಕ್ಷ್ಮಮ್ಮ (50) ಎದೆ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಕೂಡಲೇ ಇಬ್ಬರನ್ನು ಆ್ಯಂಬುಲೆನ್ಸ್ ಮೂಲಕ ಕೆಸಿ ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದರೊಂದಿಗೆ 9 ದಿನದ ಪ್ರತಿಭಟನೆಯಲ್ಲಿ ಈವರೆಗೂ 20 ಮಂದಿ ಅಸ್ವಸ್ಥರಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More