ಮಂಗಳೂರು: ಮನೆಯೊಳಗೆ ಮಂಚದಡಿಯಲ್ಲಿತ್ತು ಬೃಹತ್ ಕಾಳಿಂಗ ಸರ್ಪ, ವಿಡಿಯೋ ನೋಡಿ

ಮಂಗಳೂರು: ಮನೆಯೊಳಗೆ ಮಂಚದಡಿಯಲ್ಲಿತ್ತು ಬೃಹತ್ ಕಾಳಿಂಗ ಸರ್ಪ, ವಿಡಿಯೋ ನೋಡಿ

ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Ganapathi Sharma

Updated on: May 28, 2024 | 12:54 PM

ದಕ್ಷಿಣ ಕನ್ನಡ ಜಿಲ್ಲೆಯ ಇಂದಬೆಟ್ಟುವಿನ ಬಂಗಾಡಿ ಎಂಬಲ್ಲಿ ಮನೆಯೊಂದರಲ್ಲಿ ಮಂಚದ ಕೆಳಗೆ 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಪತ್ತೆಯಾಗಿದೆ. ಉರಗ ರಕ್ಷಕ ಅಶೋಕ್ ಲಾಯಿಲ ಎಂಬವರು ಅದನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಮಂಗಳೂರು, ಮೇ 28: ಮನೆಯೊಳಗೆ ಬಂದ 12 ಅಡಿ ಉದ್ದದ ಬೃಹತ್ ಗಾತ್ರ ಕಾಳಿಂಗ ಸರ್ಪವೊಂದನ್ನು (King Cobra) ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada) ಇಂದಬೆಟ್ಟುವಿನಲ್ಲಿ ರಕ್ಷಿಸಿ ಕಾಡಿಗೆ ಬಿಡಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಇಂದಬೆಟ್ಟುವಿನ ಬಂಗಾಡಿ (Bangadi) ಎಂಬಲ್ಲಿನ ಮನೆಯ ಮಂಚದ ಅಡಿಯಲ್ಲಿ ಕಾಳಿಂಗ ಸರ್ಪ ಇತ್ತು.

ಮನೆಮಂದಿ ಮನೆಯ ಒಂದು ಪಾರ್ಶ್ವವನ್ನು ಮಾತ್ರ ಬಳಸುತ್ತಿದ್ದರು. ಮತ್ತೊಂದು ಪಾರ್ಶ್ವದ ಕೋಣೆಯ ಮಂಚದ ಅಡಿಯಲ್ಲಿ ಕಾಳಿಂಗ ಸರ್ಪ ಇತ್ತು. ಕೋಣೆಯ ಬಾಗಿಲು ತೆಗೆದಾಗ ಮಂಚದಡಿಯಲ್ಲಿ ಶಬ್ದ ಕೇಳಿಬಂದಿದೆ. ಏನೆಂದು ಮಂಚದಡಿ ನೋಡಿದಾಗ ಬೃಹತ್ ಕಾಳಿಂಗ ಸರ್ಪ ಪತ್ತೆಯಾಗಿದೆ. ನಂತರ ಮನೆಯವರು ಉರಗ ರಕ್ಷಕ ಅಶೋಕ್ ಲಾಯಿಲ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಉರಗ ರಕ್ಷಕ ಅಶೋಕ್ ಲಾಯಿಲ ಕಾಳಿಂಗ ಸರ್ಪವನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

ಇದನ್ನೂ ಓದಿ: ಸೀರೆಯುಟ್ಟು ಕಬಡ್ಡಿ ಆಡಿದ ಮಹಿಳೆಯರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ