ಬಾಗಲಕೋಟೆ: ಬತ್ತಿದ ಕೃಷ್ಣಾ ನದಿ, ಗ್ರಾಮಕ್ಕೆ ಎಂಟ್ರಿಕೊಟ್ಟ 12 ಅಡಿ ಉದ್ದದ ಮೊಸಳೆ!

Edited By: Rakesh Nayak Manchi

Updated on: Jul 03, 2023 | 6:22 PM

ಮಳೆ ಕೊರತೆಯಾಗಿ ಕೃಷ್ಣಾ ನದಿಯಲ್ಲಿ ನೀರು ಬತ್ತಿದ ಹಿನ್ನೆಲೆ ಬೃಹತ್ ಗಾತ್ರದ ಮೊಸಳೆಯೊಂದು ಜಮಖಂಡಿ ತಾಲೂಕಿನ ಟಕ್ಕಳಕಿ ಗ್ರಾಮಕ್ಕೆ ಎಂಟ್ರಿಕೊಟ್ಟಿದೆ.

ಬಾಗಲಕೋಟೆ: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ನದಿಗಳಲ್ಲಿ ನೀರು ಬತ್ತುತ್ತಿದೆ. ಪರಿಣಾಮ ಆಹಾರದ ಕೊರತೆಯಾಗಿ ನದಿಯಲ್ಲಿ ವಾಸವಿದ್ದ ಮೊಸಳೆಗಳು (Crocodile) ಗ್ರಾಮಕ್ಕೆ ಲಗ್ಗೆ ಇಡಲು ಆರಂಭಿಸಿದ್ದು, ನದಿ ತೀರದ ನಿವಾಸಿಗಳಲ್ಲಿ ಆತಂಕ ಉಂಟು ಮಾಡುತ್ತಿದೆ. ನಿನ್ನೆಯಷ್ಟೇ ಕೊಂತಿಕಲ್​ ಗ್ರಾಮಕ್ಕೆ ಬಂದಿದ್ದ ಸುಮಾರು 9 ಅಡಿ ಉದ್ದದ ಮೊಸಳೆಯನ್ನು ಜನರು ಕಟ್ಟಿಹಾಕಿದ್ದರು. ನಂತರ ಅರಣ್ಯಾಧಿಕಾರಿಗಳು ಆಲಮಟ್ಟಿ ಹಿನ್ನೀರಿಗೆ ಬಿಟ್ಟಿದ್ದರು. ಇದೀಗ, ಜಮಖಂಡಿ ತಾಲೂಕಿನ ಟಕ್ಕಳಕಿ ಗ್ರಾಮದಲ್ಲಿ 12 ಅಡಿ ಉದ್ದದ ಮೊಸಳೆ ಪ್ರತ್ಯಕ್ಷಗೊಂಡಿದ್ದು, ಜನರು ಅದನ್ನು ಸೆರೆ ಹಿಡಿದಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಮೊಸಳೆಯನ್ನು ಆಲಮಟ್ಟಿ ಡ್ಯಾಮ್​ಗೆ ಸ್ಥಳಾಂತರ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More