20ರ ಯುವತಿ-46ರ ಅಂಕಲ್ ಲವ್: ಪ್ರೇಯಸಿ ಬೇಕು ಹೆಂಡ್ತಿನೂ ಬೇಕೆಂದ ಟೇಲರ್

Edited By:

Updated on: May 05, 2026 | 7:44 PM

46ರ ಅಂಕಲ್ 20 ವರ್ಷದ ಯುವತಿಯನ್ನು ಪ್ರೀತಿಸಿ  (Love) ಕೈಕೊಟ್ಟ ಆರೋಪ ಕೇಳಿಬಂದಿದೆ.  ಚಿಕ್ಕಬಳ್ಳಾಪುರದ (Chikkaballapur) ಬಾಗೇಪಲ್ಲಿ ಮೂಲದ ಟೈಲರ್ ರಮೇಶ ಎನ್ನುವಾತನಿಗೆ ಈಗಾಗಲೇ ಮದುವೆಯಾಗಿದೆ. ಆದರೂ ಸಹ ತನಗೆ ಮದುವೆಯಾಗಿಲ್ಲ ಎಂದು ಸುಳ್ಳು ಹೇಳಿ ಯುವತಿಯನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದಾನೆ. ಸಾಲದಕ್ಕೆ ಮದುವೆ ಮಾಡಿಕೊಳ್ಳೊದಾಗಿ ನಂಬಿಸಿ ಆಕೆಯೊಂದಿಗೆ 2 ತಿಂಗಳ ಸಂಸಾರ ಸಹ ನಡೆಸಿದ್ದಾನೆ.

ಚಿಕ್ಕಬಳ್ಳಾಪುರ, (ಮೇ 05): 46ರ ಅಂಕಲ್ 20 ವರ್ಷದ ಯುವತಿಯನ್ನು ಪ್ರೀತಿಸಿ  (Love) ಕೈಕೊಟ್ಟ ಆರೋಪ ಕೇಳಿಬಂದಿದೆ.  ಚಿಕ್ಕಬಳ್ಳಾಪುರದ (Chikkaballapur) ಬಾಗೇಪಲ್ಲಿ ಮೂಲದ ಟೈಲರ್ ರಮೇಶ ಎನ್ನುವಾತನಿಗೆ ಈಗಾಗಲೇ ಮದುವೆಯಾಗಿದೆ. ಆದರೂ ಸಹ ತನಗೆ ಮದುವೆಯಾಗಿಲ್ಲ ಎಂದು ಸುಳ್ಳು ಹೇಳಿ ಯುವತಿಯನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದಾನೆ. ಸಾಲದಕ್ಕೆ ಮದುವೆ ಮಾಡಿಕೊಳ್ಳೊದಾಗಿ ನಂಬಿಸಿ ಆಕೆಯೊಂದಿಗೆ 2 ತಿಂಗಳ ಸಂಸಾರ ಸಹ ನಡೆಸಿದ್ದಾನೆ.

ಚಿಕ್ಕಮ್ಮನ ಮನೆಗೆ ಹೋಗಿ ಬರ್ತಿದ್ದಾಗ ಯುವತಿಯನ್ನು ರಮೇಶ್ ಪರಿಚಯ ಮಾಡಿಕೊಂಡಿದ್ದ. ಬಳಿಕ ಯುವತಿಯ ಪೋನ್ ನಂಬರ್ ಪಡೆದು ಚಿನ್ನ ರನ್ನ ಗಿನ್ನ ಅಂತ ಪುಸಲಾಯಿಸಿ ಲವ್ ಮಾಡಿದ್ದ. ಆದ್ರೆ, ಇದೀಗ ಕೈಕೊಟ್ಟಿದ್ದಾನೆ. ಇದರಿಂದ ಕಂಗಾಲಾದ ಯುವತಿ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 05, 2026 07:38 PM
Loading...
Unable to load recommendations.
Follow Us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More