ದರ್ಶನ್ ಗ್ಯಾಂಗ್ ವಿರುದ್ಧ ದೋಷಾರೋಪ ನಿಗದಿ; ಆರೋಪ ಒಪ್ಪದಿದ್ದರೆ ಮುಂದೇನು?
Darshan Case: ದರ್ಶನ್ ಹಾಗೂ ಗ್ಯಾಂಗ್ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿಯಾಗಿದೆ. ಈ ಪ್ರಕರಣ ಸಾಕಷ್ಟು ಗಂಭೀರತೆ ಪಡೆದುಕೊಂಡಿದೆ. ಹೀಗಿರುವಾಗಲೇ ದರ್ಶನ್ ಅವರಿಗೆ ಇಂದು ಮಹತ್ವದ ದಿನ ಆಗಿರಲಿದೆ. ಅದಕ್ಕೆ ಕಾರಣ ದೋಷಾರೋಪ ನಿಗದಿ. ಆ ಬಗ್ಗೆ ಇಲ್ಲಿದೆ ವಿವರ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರಿಗೆ ಇಂದು (ನವೆಂಬರ್ 3) ಮಹತ್ವದ ದಿನ. ದರ್ಶನ್ ಸೇರಿ ಎಲ್ಲಾ ಆರೋಪಿಗಳು ಇಂದು (ನವೆಂಬರ್ 3) ಕೋರ್ಟ್ಗೆ ಹಾಜರಿ ಹಾಕುವ ಸಾಧ್ಯತೆ ಇದೆ. ಬೆಳಿಗ್ಗೆ 10 ಗಂಟೆಯ ಬಳಿಕ ದರ್ಶನ್ ಹಾಗೂ ಗ್ಯಾಂಗ್ನ ಕರೆದುಕೊಂಡು ಹೋಗುವ ಸಾಧ್ಯತೆ ಇದೆ. ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ದೋಷಾರೋಪ ನಿಗದಿ ಆಗಲಿದೆ. ಆರೋಪಿಗಳ ಮೇಲೆ ಪೊಲೀಸರು ಹೇರಿರುವ ಆರೋಪಗಳನ್ನು ಓದಿ ಹೇಳಲಾಗುತ್ತದೆ. ಆರೋಪಗಳನ್ನು ಒಪ್ಪಿಕೊಳ್ಳುತ್ತೀರೆಯೇ ಎಂದು ಆರೋಪಿಗಳಿಗೆ ಕೇಳಲಾಗುತ್ತದೆ. ಆರೋಪಿಗಳು ತಮ್ಮ ಮೇಲಿರುವ ಆರೋಪಗಳನ್ನು ಒಪ್ಪಿಕೊಂಡರೆ ಶಿಕ್ಷೆ ಪ್ರಕಟ ಆಗುತ್ತದೆ. ಆರೋಪಗಳನ್ನು ನಿರಾಕರಿಸಿದರೆ ಸಾಕ್ಷ್ಯಗಳ ವಿಚಾರಣೆ ನಡೆಯಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Nov 03, 2025 10:00 AM
